ನವದೆಹಲಿ : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಂಸದೆ ಪ್ರಾಣಿಗಳ ಹಕ್ಕು ಹೋರಾಟಗಾರ್ತಿ ಮನೇಕಾ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಾಣಿಗಳ ಹಕ್ಕು ಹೋರಾಟಗಾರ್ತಿ ಮನೇಕಾ ಗಾಂಧಿ ಪತ್ರ ಬರೆದಿರುವುದು ಇದೀಗ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಆನೆಯನ್ನು ಕೊಂದು ದಂತ ಮಾರಾಟ ಮಾಡುವಾಗ ಸಿಕ್ಕಿಬಿದ್ದ ಆರೋಪಿಯನ್ನು ಸಂಸದ ಪ್ರಜ್ವಲ್ ರೇವಣ್ಣ (MP Prajwal Revanna) ರಕ್ಷಿಸಲು ಒತ್ತಡ ಹಾಕುತ್ತಿದ್ದಾರೆ ಎಂದು ಆರೋಪಿಸಿ ಮನೇಕಾ ಗಾಂಧಿ ಸಿಎಂ ಬಸವರಾಜ ಬೊಮ್ಮಾಯಿಗೆ (CM Basavaraj Bommai) ಪತ್ರ ಬರೆದಿದ್ದಾರೆ.
ಅಲ್ಲದೇ ಈ ಪ್ರಕರಣದಲ್ಲಿ ತಕ್ಷಣ ಮಧ್ಯಪ್ರವೇಶ ಮಾಡಿ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಸಂಸದೆ ಮನೇಕಾ ಗಾಂಧಿ (Maneka Gandhi) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ವೀರಾಪುರ ಗ್ರಾಮದಲ್ಲಿ ಚಂದ್ರೆಗೌಡ ಎಂಬ ವ್ಯಕ್ತಿ ಆನೆಯನ್ನು ಕೊಂದಿದ್ದ. ಬಳಿಕ ಮಾರ್ಚ್ 19 ರಂದು ದಂತ ಮಾರಾಟ ಮಾಡುವ ವೇಳೆ ಬೆಂಗಳೂರಿನ ಸಿ.ಕೆ ಅಚ್ಚುಕಟ್ಟು ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಈ ವೇಳೆ ಪ್ರಜ್ವಲ್ ರೇವಣ್ಣ ಪೊಲೀಸರ ಮೇಲೆ ಒತ್ತಡ ಹೇರಿದ್ದರು ಎಂದು ಪತ್ರದಲ್ಲಿ ನಮೂದಿಸಿದ್ದಾರೆ.

ಇನ್ನು ಪ್ರಜ್ವಲ್ ರೇವಣ್ಣ ವಿರುದ್ಧ ಮನೇಕಾ ಗಾಂಧಿ ಆರೋಪ ಮಾಡಿದ್ದು, ಆರೋಪಿಗಳ ರಕ್ಷಣೆಗೆ ಸ್ಥಳೀಯ ವಲಯ ಅರಣ್ಯ ಅಧಿಕಾರಿಯೊಂದಿಗೆ ಕೂಡ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಪತ್ರದಲ್ಲಿ ಬರೆದಿದ್ಧಾರೆ. ಕೇಸ್ನಲ್ಲಿ ಆರೋಪಿಗಳ ರಕ್ಷಣೆ ಮಾಡಲು ಹಾಸನ ಅರಣ್ಯ ಇಲಾಖೆ ಆರ್ ಎಫ್ ಓ ಪ್ರಯತ್ನಿಸಿದ್ದಾರೆ. ಅಚ್ಚುಕಟ್ಟು ಪ್ರದೇಶದ ಪೊಲೀಸರಿಗೆ ಒತ್ತಡ ಹಾಕಿದ್ದಾರೆ ಎಂದು ಮೇನಕಾ ಗಾಂಧಿ ಆರೋಪಿಸಿದ್ದಾರೆ.

ಆರೋಪಿಗಳು ತಮ್ಮ ಪಾರ್ಟಿಯ ಬೆಂಬಲಿಗರು ಎನ್ನುವ ಕಾರಣಕ್ಕೆ ಅವರ ಪರವಾಗಿ ಸಂಸದ ಪ್ರಜ್ವಲ್ ರೇವಣ್ಣ ಒತ್ತಡ ಹಾಕಿದ್ದಾರೆ ಎಂದು ಮನೇಕಾ ಗಾಂಧಿ ದೂರು ನೀಡಿದ್ದಾರೆ.

ಹಾಗೇ ತಕ್ಷಣ ಸಿಎಂ ಮಧ್ಯ ಪ್ರವೇಶಿಸಿ ನಿಷ್ಪಕ್ಷಪಾತ ರೀತಿಯಲ್ಲಿ ತನಿಖೆ ನಡೆಸಬೇಕೆಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
#maneka gandhi #animal lover #member of parliment #prajwal revanna #elephant tusker #police # serious alligation




