DHARMASTHALA DHARMADHIKARI VEERENDRA HEGGADE: ರಾಜ್ಯ ಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ

ನವದೆಹಲಿ : ಧರ್ಮಸ್ಥಳ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಅವರು ಇಂದು ರಾಜ್ಯ ಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. ದೇವರ ಹೆಸರಿನಲ್ಲಿ ಮತ್ತು ಕನ್ನಡದಲ್ಲಿ ವಿರೇಂದ್ರ ಹೆಗ್ಗಡೆ ಅವರು ಪ್ರಮಾಣವಚನ ಸ್ವೀಕರಿಸಿದರು.
ಸೋಮವಾರದಿಂದ ಸಂಸತ್ ನ ಮುಂಗಾರು ಅಧಿವೇಶನ ಆರಂಭವಾಗಿತ್ತು. ಆದರೆ ವೀರೆಂದ್ರ ಹೆಗ್ಗಡೆ ಅವರು ನಿನ್ನೆ ನವದೆಹಲಿಗೆ ಪ್ರಯಾಣಿಸಿ, ಇಂದು ಪ್ರಮಾಣ ವಚನ ಸ್ವೀಕರಿಸಿದರು. ಇವರೊಂದಿಗೆ ಸಂಗೀತ ನಿರ್ದೇಶಕ ಇಳೆಯರಾಜ, ಅಥ್ಲೀಟ್ ಪಿ ಟಿ ಉಷಾ ಮತ್ತು ಚಲನಚಿತ್ರ ಕಥೆ ಸಂಭಾಷಣೆಗಾರ ವಿಜಯೇಂದ್ರ ಪ್ರಸಾದ್ ಅವರುಗಳು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದರು.

ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ ವಿರೇಂದ್ರ ಹೆಗ್ಗಡೆ
ಇದಾದ ಬಳಿಕ ಡಾ. ವಿರೇಂದ್ರ ಹೆಗ್ಗಡೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸೌಹಾರ್ದ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.

#veerendra heggade #dharmasthala dharmadhikari #prime minister #narendra modi #rajya sabhe #oath taken #naleen kumar kateel #prahallad joshi

More News