ನವದೆಹಲಿ: ನ್ಯಾಯಬೆಲೆ ಅಂಗಡಿ ವಿತರಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಇಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು.
ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ವಿತರಕರು ತಮ್ಮ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿದರು. ಹಾಗೂ ಶಿಘ್ರದಲ್ಲಿ ಬೇಡಿಕೆ ಈಡೇರದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಅಖಿಲ ಭಾರತ ನ್ಯಾಯಬೆಲೆ ಅಂಗಡಿ ವಿತರಕರ ಒಕ್ಕೂಟ(AIFPSDF)ದ ಉಪಾಧ್ಯಕ್ಷರಾಗಿರುವ ಅವರು ಬಿಜೆಪಿ ಪಕ್ಷದ ಸದಸ್ಯರೂ ಆಗಿದ್ದಾರೆ. ಇಂದು ಪ್ರಧಾನಿ ಅವರಿಗೆ ಮನವಿ ಪತ್ರ ಸಲ್ಲಿಸಿದ ನಂತರ ನಾಳೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಲು ಯೋಜನೆ ರೂಪಿಸಲಾಗಿದೆ.
ಅಕ್ಕಿ, ಗೋಧಿ ಮತ್ತು ಸಕ್ಕರೆ ಮೇಲಿನ ನಷ್ಟಕ್ಕೆ ಪರಿಹಾರ ನೀಡಬೇಕು, ಖಾದ್ಯ ತೈಲ ಮತ್ತು ಬೇಳೆ ಕಾಳುಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಸರಬರಾಜು ಮಾಡುವುದು ಸೇರಿದಂತೆ ಒಟ್ಟು ಒಂಭತ್ತು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನಾಕಾರರು ಆಗ್ರಹಿಸಿದರು.
ಜನಸಾಮಾನ್ಯರ ಆಶೋತ್ತರಗಳನ್ನು ಈಡೇರಿಸಲು ಕೇಂದ್ರ ವಿಫಲ
ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಪ್ರಧಾನಿ ಅವರ ಸಹೋದರ ಪ್ರಹ್ಲಾದ್ ಮೋದಿ, ಜನಸಮಾನ್ಯರ ಆಶೋತ್ತರಗಳನ್ನು ಈಡೇರಿಸುವಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗದೆ ಎಂದು ಟೀಕಿಸಿದರು.

ಬಿಜೆಪಿ ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಲು ಸಾಕಷ್ಟು ಶ್ರಮವಹಿಸಲಾಗಿದೆ. ಆದರೆ, ಅದೇ ಶ್ರಮ ಜನರ ಸಮಸ್ಯೆಗಳನ್ನು ಈಡೇರಿಸುವಲ್ಲಿ ಆಗುತ್ತಿಲ್ಲ, ಆದ್ದರಿಂದ ಪ್ರತಿಭಟನೆಯ ದಾರಿಯನ್ನು ಪ್ರತಿಯೊಬ್ಬರು ಹಿಡಿಯುತ್ತಿದ್ದಾರೆ, ಇದು ಎನ್ ಡಿ ಎ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದರು.

ನನ್ನ ಸಹೋದರನ ಮೇಲೆ ನನಗೆ ಸಾಕಷ್ಟು ಗೌರವವಿದೆ ಆದರೆ, ನಾನು ಒಂದು ವೃತ್ತಿಯಲ್ಲಿರುವುದರಿಂದ ನಾನು ಸಹೋದರನ ಮುಂದೆ ನನ್ನ ಧ್ವನಿ ಎತ್ತಬೇಕಾಗಿದೆ ಎಂದು ಹೇಳಿದ ಅವರು, ಭ್ರಷ್ಟಾಚಾರದ ವಿರುದ್ಧ ಮೋದಿಯವರು ಹೋರಾಟ ಮಾಡಲಾಗುವುದು ಎಂದಾಗ ಸಂತಸವಾಗಿತ್ತು ಎಂದರು.
ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕೇಂದ್ರ ಸರ್ಕಾರ ಮುಂದಾಗದಿದ್ದಲ್ಲಿ ಮುಂಬರುವ ದಿನಗಳಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಪ್ರಹ್ಲಾದ್ ಮೋದಿ ಅವರು ಎಚ್ಚರಿಕೆ ನೀಡಿದರು.
#Prime minister #narendra modi #prahalld modi #protest #janther manther #ration distribution #nda failed #street




