GRAND WELCOME TO SIDDARAMAIAH: ಎಲ್ಲೆಡೆ ಸಿದ್ದರಾಮಯ್ಯ ಅವರಿಗೆ ಅದ್ದೂರಿ ಸ್ವಾಗತ : ಕಾಂಗ್ರೆಸ್ ನ ಕಾರ್ಯಕರ್ತರಲ್ಲಿ ಮನೆಮಾಡಿದ ಹುಮ್ಮಸ್ಸು

ಚಿಂತಾಮಣಿ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಪಾದಯಾತ್ರೆಯಲ್ಲಿ ಭಾಗವಹಿಸಲು ಚಿಂತಾಮಣಿಗೆ ಆಗಮಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಆತ್ಮೀಯವಾಗಿ, ಸಂಭ್ರಮದಿಂದ ಬರ ಮಾಡಿಕೊಂಡರು.
ದಾವಣಗೆರೆಯಲ್ಲಿ ಸಿದ್ದರಾಮಯ್ಯ @75 ಅದ್ದೂರಿ ಕಾರ್ಯಕ್ರಮ ಮಾಡಿದ ನಂತರ ಸಿದ್ದರಾಮಯ್ಯ ಅವರಿಗೆ ರಾಜ್ಯದ ಎಲ್ಲಾ ಕಡೆಗಳಲ್ಲಿ ಅದ್ದೂರಿ ಸ್ವಾಗತ ಸಿಗುತ್ತಿದೆ. ಕಾರ್ಯಕ್ರಮದಲ್ಲಿ ಒಮ್ಮತದ ಮಂತ್ರ ಜಪಿಸಿದ್ದರಿಂದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಹುಮ್ಮಸ್ಸು ಮನೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಸಂಪೂರ್ಣ ತಯಾರಿ ನಡೆಸಿತ್ತಿರುವ ಕಾಂಗ್ರೆಸ್ ಪಕ್ಷವನ್ನು ನೋಡಿ ಬಿಜೆಪಿಯಲ್ಲಿ ಸಂಪೂರ್ಣವಾಗಿ ಹುಮ್ಮಸ್ಸು ಕಳೆಗುಂದಿದೆ.

ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಶಾಸಕರಾದ ಶ್ರೀನಿವಾಸಗೌಡ, ನಾರಾಯಣಸ್ವಾಮಿ, ನಜೀರ್ ಅಹಮದ್, ಶರತ್ ಬಚ್ಚೇಗೌಡ, ಶಿವಶಂಕರ ರೆಡ್ಡಿ, ಮಾಜಿ ಶಾಸಕ ಸುಧಾಕರ್ ಹಾಜರಿದ್ದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಗೆ ತೆರಳುವ ಮಾರ್ಗದಲ್ಲಿ ವಿಜಯಪುರ ಹಾಗೂ ಜಂಗಮಕೋಟೆ ಕ್ರಾಸ್ ನಲ್ಲಿಯೂ ಸಿದ್ದರಾಮಯ್ಯ ಅವರಿಗೆ ಪಕ್ಷದ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು.

More News