ARRESTED: ಬೆಂಗಳೂರಿನಲ್ಲಿ ಟಿಪ್ಪು ಸುಲ್ತಾನ್ ಫ್ಲೆಕ್ಸ್ ಹರಿದಿದ್ದ ಪುನೀತ್ ಕೆರೆಹಳ್ಳಿ ಸೇರಿ ಮೂವರ ಬಂಧನ

ಬೆಂಗಳೂರು : ಕಾಂಗ್ರೆಸ್ ನ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಅಂಗವಾಗಿ ಬೆಂಗಳೂರಿನ ನೃಪತುಂಗ ರಸ್ತೆ ಮತ್ತು ಹಡ್ಸನ್ ರಸ್ತೆಯಲ್ಲಿ ಅಳವಡಿಸಿದ್ದ ಟಿಪ್ಪು ಸುಲ್ತಾನ್ ಫ್ಲೆಕ್ಸ್ ಹರಿದು ಹಾಕಿದ್ದ ಆರೋಪದಡಿಯಲ್ಲಿ ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಸೇರಿದಂತೆ ಮೂವರು ಆರೋಪಿಗಳನ್ನು ಹಲಸೂರು ಗೇಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಶನಿವಾರ ರಾತ್ರಿ ಸುಮಾರು ಹತ್ತು ಮೂವತ್ತಕ್ಕೆ ಈ ಮೂವರು ನೃಪತುಂಗ ರಸ್ತೆ ರಸ್ತೆ ಮತ್ತು ಹಡ್ಸುನ್ ವೃತ್ತದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರವಿರುದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಫ್ಲೆಕ್ಸಅನ್ನು ಹರಿದುಹಾಕಲಾಗಿತ್ತು. ಈ ಪ್ರಕರಣದ ವಿರುದ್ಧ ರಾಜಾಜಿನಗರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಂಜುನಾಥ್ ಪೊಲೀಸರಿಗೆ ದೂರು ನೀಡಿದ್ದರು.

ಫ್ಲೆಕ್ಸ್ ಹರಿದು ಹಾಕುತ್ತಿರುವ ವಿಡಿಯೋವನ್ನು ಆರೋಪಿಗಳೇ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದರು. ಇದನ್ನೆ ಪುರಾವೆಯನ್ನಾಗಿ ಪರಿಗಣಿಸಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಇನ್ನು ಹಲವಾರು ಜನರು ತಲೆ ಮರೆಸಿಕೊಂಡಿದ್ದಾರೆ ಇವರ ಪತ್ತೆಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಮುಸೌಹಾರ್ದತೆಗೆ ಧಕ್ಕೆ ಮತ್ತು ಉದ್ದೇಶಪೂರ್ವಕವಾಗಿ ಕೋಮು ಗಲಭೆ ಪ್ರಚೋದನೆ ಆರೋಪದಡಿ ಹಲಸೂರು ಗೇಟ್ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

More News