ADGP BAIL PLEA DISMISSED: ಸೆಷನ್ಸ್ ನ್ಯಾಯಾಲಯದಲ್ಲಿ ಎಡಿಜಿಪಿ ಅಮೃತ್ ಪೌಲ್ ಜಾಮೀನು ಅರ್ಜಿ ವಜಾ

ಬೆಂಗಳೂರು : ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಡಿಜಿಪಿ ಅಮೃತ್ ಪೌಲ್ ಅವರ ಜಾಮೀನು ಅರ್ಜಿ ಸೆಷನ್ಸ್ ಕೋರ್ಟ್ ನಲ್ಲೂ ವಜಾಗೊಂಡಿದೆ.
ಅಮೃತ್ ಪೌಲ್ ಅವರು ಜಾಮೀನು ಕೋರಿ 52 ನೇ ಸಿಸಿಹೆಚ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ವೇಳೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಇನ್ನೂ ಸಲ್ಲಿಕೆ ಆಗಿಲ್ಲ, ಆರೋಪಿ ತುಂಬಾ ಪ್ರಭಾವಿ ಆಗಿದ್ದಾರೆ.
ಹಗರಣದ ಸಂಬಂಧ ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜಾಮೀನು ನೀಡದಂತೆ ಸಿಐಡಿ ಎಸ್ ಪಿ ಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.

More News