ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡುವುದರ ಮೂಲಕ ಅವರ ಕಾರ್ಯಚಟುವಟಿಕೆಗಳಿಗೆ ಸಂಪೂರ್ಣವಾಗಿ ನಿರ್ಬಂಧ ಹೇರಿದೆ.
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಇಂದು ಕೇಂದ್ರಿಯ ಸಂಸದೀಯ ಮಂಡಳಿಗೆ ಆಯ್ಕೆ ಮಾಡಲಾಗಿದೆ. ಆದರೆ, ಅವರು ಬಯಸಿದ್ದು ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ಸ್ಥಾನಮಾನ ಆದರೆ, ಅವರಿಗೇ ಪಕ್ಷದ ಹೈಕಮಾಂಡ್ ಪದವಿಯನ್ನು ನೀಡಿ ಎಲ್ಲಾ ರೀತಿಯಲ್ಲೂ ಕಟ್ಟಿ ಹಾಕುವ ಯತ್ನ ನಡೆಸಿದೆ.
ಇನ್ನು ಮಂದೆ ಯಡಿಯೂರಪ್ಪ ಅವರು ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸುವ ಕೆಲಸ ಮಾಡಬೇಕು, ಆದರೆ, ಯಾವುದೇ ವ್ಯಯಕ್ತಿಕ ನಿರ್ದಾರ ಕೈಗೊಳ್ಳುವಂತಿಲ್ಲ. ಅವರು ರಾಜ್ಯತದ್ಲಲಿ ಪ್ರವಾಸ ಮಾಡುವ ಇಂಗಿತ ವ್ಯಕ್ತಪಡಿಸಿದ್ದರು. ಅದಕ್ಕೆ ವರಿಷ್ಠರು ಇದುವರೆಗೂ ಅನುಮತಿ ನೀಡಿಲ್ಲ.
ಹಾಗೆಯೇ ಪುತ್ರನಿಗೆ ಎಂಎಲ್ ಸಿ ಮಾಡುವ ಪ್ರಯತ್ನಕ್ಕೆ ಕೈಹಾಕಿದ್ದರು ಅದಕ್ಕೂ ಹೈಕಮಾಂಡ್ ಒಪ್ಪಿಗೆ ಸೂಚಿಸಿಲ್ಲ. ಇದೀಗ ಸಂಸದೀಯ ಮಂಡಳಿ ಸದಸ್ಯರಾಗಿ ಆಯ್ಕೆ ಮಾಡುವ ಮೂಲಕ ಅವರ ಕಾರ್ಯಚಟುವಟಿಕೆಗಳಿಗೆ ಕಡಿವಾಣ ಹಾಕಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.
ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ರಾಜ್ಯ ನಾಯಕರ ಹರ್ಷ
ಬಿ ಎಸ್ ಯಡಿಯೂರಪ್ಪ ಅವರನ್ನು ಸಂಸದೀಯ ಮಂಡಳಿ ಸದಸ್ಯ ಸ್ಥಾನ ಕಲ್ಪಿಸಿರುವುದನ್ನು ರಾಜ್ಯದ ಅನೇಕ ನಾಯಕರು ಸ್ವಾಗತಿಸಿದ್ದಾರೆ. ಇದು ಮುಂಬರುವ ವಿಧಾನಸಭಾ ಚುನಾವಣೆಯ ಸ್ವಷ್ಟ ಸಂದೇಶ ಎನ್ನುತ್ತಿದ್ದಾರೆ.
ತಮ್ಮ ಶಿಕಾರಿಪುರ ತಮ್ಮ ವಿಧಾನಸಭಾ ಕ್ಷೇತ್ರವನ್ನು ತಮ್ಮ ಪುತ್ರನಿಗೆ ಬಿಟ್ಟು ಕೊಟ್ಟು ತಾವು ಸಕ್ರೀಯ ರಾಜಕಾರಣದಿಂದ ದೂರ ಉಳಿಯುವುದಾಗಿ ಘೋಷಣೆ ಮಾಡಿದ ನಂತರ ಬಿಜೆಪಿ ಹೈಕಮಾಂಡ್ ಮತ್ತೆ ಯಡಿಯೂರಪ್ಪ ಅವರಿಗೆ ಮತ್ತೆ ಮಣಿ ಹಾಕಿರುವುದು ಹೈಕಮಾಂಡ್ ಬೇರೆಯೇ ರೀತಿಯಲ್ಲಿ ಅವರನ್ನು ಬಳಸಿಕೊಳ್ಳಲು ಚಿಂತಿಸಿದೆ ಎನ್ನುವುದಂತು ಇಲ್ಲಿ ಸ್ಪಷ್ಟವಾಗಿದೆ.
ಸಿಎಂ ಸ್ವಾಗತ
ರೈತ ನಾಯಕ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಸಂಸದೀಯ ಮಂಡಳಿ ಸದಸ್ಯರನ್ನಾಗಿ ಆಯ್ಕೆ ಮಾಡಿರುವುದು ಅತೀವ ಸಂತಸ ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Thanks to Hon’ble PM @narendramodi Ji & @BJP4indla President @JPNaddaJi for appointing B.S. Yediyurappa Ji as a Member of BJP National Parliamentary Board. This will boost the morale of @BJP4Karnataka Karykartas & rejuvenate them for upcoming 2023 elections. @BSYBJP pic.twitter.com/ZjRrMFSeqx
— Basavaraj S Bommai (@BSBommai) August 17, 2022
ತಾವು ಈ ಹುದ್ದೆಗೆ ಏರಿರುವುದರಿಂದ @BJP4Karnataka ಕ್ಕೆ ಆನೆ ಬಲ ಬಂದಂತಾಗಿದೆ. ಮುಂಬರುವ 2023ರ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ನಿಶ್ಚಿತ. @BSYBJP ಅವರನ್ನು ಈ ಉನ್ನತ ಹುದ್ದೆಗೆ ನೇಮಕ ಮಾಡಿರುವ ಪ್ರಧಾನಮಂತ್ರಿ ಶ್ರೀ @narendramodi ಅವರಿಗೆ, ರಾಷ್ಟ್ರೀಯ ಅಧ್ಯಕ್ಷ ಶ್ರೀ @JPNadda ಅವರಿಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ.
— Basavaraj S Bommai (@BSBommai) August 17, 2022
ಈ ಉನ್ನತ ಹುದ್ದೆಯಿಂದ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ. ಮುಂಬರುವ 2023 ರ ಚುನಾವಣೆಯಲ್ಲಿ ಪಕ್ಷ ಜಯಭೇರಿ ಬಾರಿಸುವುದು ನಿಶ್ಚಿತ ಹಾಗೂ ಅವರನ್ನು ಆಯ್ಕೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.




