ಬೆಂಗಳೂರು : ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರಿಂದ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ ಅವರಿಂದ ಇಡೀ ದಕ್ಷಿಣ ಭಾರತಕ್ಕೆ ಲಾಭವಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ ಎಸ್ ವೈ ಅವರು ಬಿಜೆಪಿ ಸಂಸದೀಯ ಮಂಡಳಿ ಸದಸ್ಯಕ್ಕೆ ಆಯ್ಕೆಯಾಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು. ಹಾಗೆಯೇ ಇಂದು ಬಿ ಎಸ್ ವೈ ಅವರ ನೀವಾಸಕ್ಕೆ ತೆರಳಿ ಅವರನ್ನು ಅಭಿನಂದಿಸಿದರು.
ಲಿಂಗಾಯುತ ಸಮುದಾಯದ ನಾಯಕರಲ್ಲಿ ಬಿ ಎಸ್ ವೈ ಅವರು ಒಬ್ಬರು. ಆದರ ಲಾಭ ಪಡೆಯುವಲ್ಲಿ ಬಿಜೆಪಿ ಮುಂದಾಗಿದ್ದು, ದಕ್ಷಿಣ ಭಾರತಕ್ಕೆ ಲಾಭವಿದೆ ಎಂದು ಅರುಣ್ ಸಿಂಗ್ ಹೇಳಿದರು. ಪಕ್ಷದ ಉನ್ನತ ಮಟ್ಟದ ಸಮಿತಿಯ ಸದಸ್ಯರಾಗಿರುವುದರಿಂದ ಪಕ್ಷಕ್ಕೆ ದೊಡ್ಡ ಮಟ್ಟದ ಶಕ್ತಿ ಮತ್ತು ಲಾಭ ಬಂದಿದೆ ಎಂದು ತಿಳಿಸಿದರು.
ಅವರ ರಾಜಕೀಯ ಅನುಭವ ಪಕ್ಷಕ್ಕೆ ಲಾಭ ತಂದಿದೆ. ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ನಾವು ಸಾಗುತ್ತೇವೆ, ಪ್ರಧಾನಿ ಮೋದಿಯವರಿಗೂ ಕೂಡ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದರು. ಇನ್ನು 2023ರ ಚುನಾವಣೆಗೆ ಬಿಎಸ್ ವೈ ಅವಶ್ಯಕತೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಗೊತ್ತಿರುವ ವಿಷಯವಾಗಿದೆ ಎಂದರು.

ಯಡಿಯೂರಪ್ಪ ಯಾವಾಗಲೂ ಕಾರ್ಯಕರ್ತರಿಗೆ ಬೆಂಬಲ ಕೊಡುತ್ತಾರೆ, ಇನ್ನು ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಬಗ್ಗೆ ಮಾತನಾಡಿದ ಅವರು, ಪ್ರಕರಣದ ವಿಚಾರವಾಗಿ ಸರ್ಕಾರ ಎಲ್ಲಾ ಕ್ರಮ ತೆಗೆದುಕೊಂಡಿದೆ, ಆರೋಪಿಗಳನ್ನು ಬಂಧಿಸಿ ಜೈಲನಲ್ಲಿಟ್ಟಿದ್ದಾರೆ. ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಲಿದೆ ಎಂದು ಹೇಳಿದರು.

ಇನ್ನು ಸಿದ್ದರಾಮೋತ್ಸವಕ್ಕೆ ಪರ್ಯಾಯವಾಗಿ ಬಿಜೆಪಿ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ ಅನ್ನೋ ಪ್ರಶ್ನೆಗೆ ಉತ್ತರಿಸಿದ ಅವ್ರು, ಕಾಂಗ್ರೆಸ್ ನವರು ಸಿದ್ದರಾಮಯ್ಯ ಹೆಸರಿನಲ್ಲಿ ಉತ್ಸವ ಮಾಡಿದರು. ಬಿಜೆಪಿ ಜನರಿಗಾಗಿ ಉತ್ಸವ ಮಾಡುತ್ತದೆ, ರೈತರು ಕೂಲಿ ಕಾರ್ಮಿಕರು ಬಡವರಿಗಾಗಿ ಉತ್ಸವ ಮಾಡುತ್ತೆ ಎಂದು ಅರುಣ್ ಸಿಂಗ್ ಹೇಳಿದರು.