ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ನಿಧನ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ನಿಧನ ಹೊಂದಿದ್ದಾರೆ.
ಬೆಳಗ್ಗೆ ಜಿಮ್‌ಗೆ ಹೋಗಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಅವರನ್ನು ಕೊಂಡೊಯ್ಯಲಾಯಿತು. ಆದರೆ, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ನಿಧನ ಹೊಂದದ್ದಾರೆ.
ಬೊಮ್ಮಾಯಿ ಅವರು ಗೃಹ ಸಚಿವರಾದಾಗಿಂದ ಅವರ ಮಾಧ್ಯಮ ವಕ್ತಾರರಾಗಿ ಕೆಲಸ ಮಾಡುತ್ತಿದ್ದ ಗುರುಲಿಂಗಸ್ವಾಮಿ, ನಂತರ ಸಿಎಂ ಮಾಧ್ಯಮ ಸಂಯೋಜಕರಾಗಿ ಪ್ರಸ್ತುತ ಕೆಲಸ ಮಾಡುತ್ತಿದ್ದರು. ಬೆಂಗಳೂರಿನಲ್ಲಿ ಈಟಿವಿ, ವಿಜಯವಾಣಿ, ಟಿವಿ5 ಸೇರಿದಂತೆ ಅನೇಕ ಸುದ್ದಿ ಸಂಸ್ಥೆಗಳಲ್ಲಿ ಅವರು ಕೆಲಸ ಮಾಡಿದ್ದರು.

More News