AMIT SHAH MEETS ANCTOR Jr. NTR: ನಟ ಜ್ಯೂ. ಎನ್ ಟಿ ಆರ್- ಕೇಂದ್ರ ಸಚಿವ ಅಮಿತ್ ಶಾ ಭೇಟಿ: ತೆಲಂಗಾಣ ರಾಜಕೀಯದಲ್ಲಿ ತಲ್ಲಣ

ಹೈದರಾಬಾದ್ : ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ತೆಲುಗು ಖ್ಯಾತ ನಟ ಜ್ಯೂನಿಯರ್ ಎನ್ ಟಿ ಆರ್ ಭೇಟಿ ಮಾಡಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ತೆಲಂಗಾಣ ರಾಜಕೀಯದಲ್ಲಿ ತಲ್ಲಣವನ್ನುಂಟು ಮಾಡಿದೆ.
ಭಾನುವಾರ ಹೈದರಾಬಾದ್ ಹೆ ಅಮಿತ್ ಶಾ ಭೇಟಿ ನೀಡಿದ್ದರು, ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ನಂತರ ಅವರು ಜ್ಯೂನಿಯರ್ ಎನ್ ಟಿ ಆರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆದರೆ , ಇವರಿಬ್ಬರ ಮಾತುಕತೆ ವಿವರ ಬಹಿರಂಗವಾಗಿಲ್ಲ. ಆದರೆ, ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ವಿಶ್ಲೇಷಣೆ ನಡೆಸುತ್ತಿದ್ದಾರೆ. ಆದರೆ, ಇವರಿಬ್ಬರ ಭೇಟಿಯ ಚಿತ್ರಗಳನ್ನು ಅಮಿತ್ ಷಾ ತಮ್ಮ ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿದ್ದಾರೆ.
ತೆಲಂಗಾಣ ರಾಜ್ಯದಲ್ಲಿ ನೆಲೆ ಕಂಡುಕೊಳ್ಳಲು ಬಿಜೆಪಿ ಹರಸಾಹಸ ಪಡುತ್ತಿದೆ. ಇದರ ಭಾಗವಾಗಿಯೇ ಸಿನೆಮಾ ಮತ್ತು ಇನ್ನಿತರ ಕ್ಷೇತ್ರದ ಗಣ್ಯರನ್ನು ಸೆಳೆಯಲು ಪ್ರಯತ್ನಿಸುತ್ತಿದೆ. ಆದ್ದರಿಂದಲೇ ಖ್ಯಾತ ನಿರ್ದೇಶಕ ರಾಜಮೌಳಿಯವರ ತಂದೆ ವಿಜಯೇಂದ್ರ ಪ್ರಸಾದ್ ಅವರಿಗೆ ರಾಜ್ಯ ಸಭಾ ಸ್ಥಾನ ನೀಡಿದೆ ಎಂದು ಹೇಳಲಾಗುತ್ತಿದೆ.
ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು ತೆಲುಗು ದೇಶಂ ಪಕ್ಷಗಳು ನೆಲಕಚ್ಚಿವೆ, ಹೇಗಾದರೂ ಮಾಡಿ ಟಿಆರ್ ಎಸ್ ಅನ್ನು ಮಣಿಸಿ ಅಧಿಕಾರ ಪಡೆಯುವ ಆಶೆ ಬಿಜೆಪಿಯದ್ದು, ಆದ್ದರಿಂದ ಜ್ಯೂನಿಯರ್ ಎನ್ ಟಿ ಆರ್ ಅವರನ್ನು ಅಮಿತ್ ಶಾ ಭೇಟಿ ಮಾಡಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಈ ಸಂಬಂಧ ಎನ್ ಟಿ ಆರ್ ಸ್ಪಷ್ಟನೆ ನೀಡಿದ್ದು, ನಾನು ರಾಜಕೀಯದಲ್ಲಿ ಯಾವುದೇ ರೀತಿಯ ಆಸಕ್ತಿ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ತಮ್ಮ ತಾತ ಸ್ಥಾಪಿಸಿರುವ ಟಿಡಿಪಿ ಪಕ್ಷದ ಕಡೆ ಒಲವು ಹೊಂದಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಆದರೆ ಆ ಪಕ್ಷದಲ್ಲಿ ಪರಿಸ್ಥಿತಿ ಸರಿಯಿಲ್ಲದೇ ಇರುವುದರಿಂದ ಅವರು ರಾಜಕೀಯದಿಂದ ದೂರ ಉಳಿದಿದ್ದಾರೆ.

ಟಿಡಿಪಿ ಪಕ್ಷದ ಒಂದು ಬಣ ಎನ್ ಟಿ ಆರ್ ಅವರನ್ನು ಉತ್ತರಾಧಿಕಾರಿಯನ್ನಾಗಿ ಮಾಡಬೇಕು ಎಂದು ಹೇಳಿಕೆ ನೀಡುತ್ತಲೆ ಇದೆ. ಆದರೆ. ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ತಮ್ಮ ಪುತ್ರ ನಾರಾ ಲೋಕೋಶ್ ಅವರನ್ನು ಉುತ್ತರಾಧಿಕಾರಿಯನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ.

#jr. ntr #chandrababu naidu #tdp #trs # Amit shah #bjp

More News