40% COMMISSION GOVERNMENT: 40% ಕಮಿಷನ್ ಹಗರಣ: ನ್ಯಾಯಾಂಗ ತನಿಖೆ ನಡೆಸುವುದಾದರೆ ದಾಖಲಾತಿ ನೀಡಲು ಸಿದ್ದ: ಸಿದ್ದರಾಮಯ್ಯ

ಬೆಂಗಳೂರು : ಟೆಂಡರ್‌ ಅನುಮೋದನೆಗೆ ಮೊದಲೇ 30 ರಿಂದ 40% ಲಂಚ ಕೊಡಬೇಕಾಗಿದೆ. ಪ್ರಧಾನಿಗಳಿಗೆ ಪತ್ರ ಬರೆದು ಒಂದು ವರ್ಷ ಆದರೂ ಅವರು ಯಾವ ಕ್ರಮ ಕೈಗೊಂಡಿಲ್ಲ. ನಾವು ನ್ಯಾಯಾಂಗ ತನಿಖೆ ನಡೆಸುವುದಾದರೆ ದಾಖಲಾತಿ ಕೊಡಲು ತಯಾರಾಗಿದ್ದೇವೆ ಎಂದು ಗುತ್ತಿಗೆದಾರರ ಸಂಘ ಹೇಳಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.
ಬೆಂಗಳೂರಿನಲ್ಲಿ ರಾಜ್ಯ ಗುತ್ತಿಗೆದಾರರ ಸಂಘದ ಸುಮಾರು 20-25 ಪದಾಧಿಕಾರಿಗಳು ಭೇಟಿ ಮಾಡಿದ್ದಾರೆ. ಅರಣ್ಯ ಗುತ್ತಿಗೆದಾರರ ಸಂಘದವರು ಮನವಿ ಪತ್ರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಒಂದು ವೇಳೆ ಕಮಿಷನ್ ಪ್ರಕರಣವನ್ನು ನಮ್ಮಿಂದ ಸಾಬೀತು ಮಾಡಲು ಆಗದೆ ಹೋದರೆ ಯಾವುದೇ ರೀತಿಯ ಕಾನೂನು ಕ್ರಮ ಎದುರಿಸಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.
ನಾನು ಕೂಡ ಹೈಕೋರ್ಟ್‌ ನ ಹಾಲಿ ನ್ಯಾಯಾಧೀಶ ಉಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆ ಮಾಡಿ ಎಂದು ಒತ್ತಾಯ ಮಾಡಿದ್ದೆ. ಸರ್ಕಾರ ಇದಕ್ಕೆ ಒಪ್ಪುತ್ತಾ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಭ್ರಷ್ಟಾಚಾರ ಎಲ್ಲಾ ಕಾಲದಲ್ಲೂ ಆಮೆ ವೇಗದಲ್ಲಿ ಇತ್ತು, ಈಗ ಶರವೇಗದಲ್ಲಿ ನಡೆಯುತ್ತಿದೆ ಎಂದು ಗುತ್ತಿಗೆದಾರರ ಸಂಘದವರು ಹೇಳಿದ್ದಾರೆ. ಗುತ್ತಿಗೆದಾರರಿಗೆ ಜಲಸಂಪನ್ಮೂಲ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಹಾಗೂ ಬಿಬಿಎಂಪಿ ಇಂದ ಸುಮಾರು 22,000 ಕೋಟಿಗೂ ಅಧಿಕ ಹಣ ಬಿಡುಗಡೆಯಾಗಬೇಕಿದೆಯಂತೆ. ಈ ಬೃಹತ್‌ ಬಾಕಿ ಮೊತ್ತವನ್ನು ಆದ್ಯತೆ ಮೇಲೆ ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಇನ್ನೊಂದು ವಿಚಾರವೆಂದರೆ ಅನುದಾನ ಮೀಸಲಿಡದೆ ಟೆಂಡರ್‌ ಕರೆಯುತ್ತಾರೆ, ಇದರಿಂದ ಕಾಮಗಾರಿ ಹಣ ಬಿಡುಗಡೆ ಆಗುವುದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.
ನಾವು ಸರ್ಕಾರದ ಮೇಲೆ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಡ ಹಾಕುತ್ತೇವೆ. ಒಂದು ವೇಳೆ ಸರ್ಕಾರ ನಮ್ಮ ಆಗ್ರಹಕ್ಕೆ ಬೆಲೆ ಕೊಡದೆ ಹೋದರೆ ಈ ವಿಚಾರವನ್ನು ಜನರ ಬಳಿಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದ ಸಿದ್ದರಾಮಯ್ಯ, ಸರ್ಕಾರ ಯಾವ ಭ್ರಷ್ಟಾಚಾರ ಮಾಡಿಲ್ಲ ಎಂದು ಹೇಳುತ್ತಿದೆ. ಗುತ್ತಿಗೆದಾರರ ಸಂಘದವರು ಸರ್ಕಾರದ ಭ್ರಷ್ಟಾಚಾರವನ್ನು ಸಾಬೀತು ಮಾಡುತ್ತೇವೆ, ಹಾಗಾದರೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಇರುವ ಸಮಸ್ಯೆಯೇನು? ಎಂದು ಪ್ರಶ್ನಿಸಿದ್ದಾರೆ.

ಕೆಂಪಣ್ಣನವರು ಪ್ರಧಾನಿಗೆ ಮತ್ತೊಮ್ಮೆ ಪತ್ರ ಬರೆಯುವುದಾಗಿ ಹೇಳಿದ್ದಾರೆ. ಮುನಿರತ್ನ ಅವರ ಹೆಸರು ಪ್ರಸ್ತಾಪ ಮಾಡಿದ್ದಾರೆ, ಇದರ ಜೊತೆಗೆ ನೀರಾವರಿ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಇಲಾಖೆ,, ಬೆಂಗಳೂರು ನಗರಾಭಿವೃದ್ಧಿ ಇಲಾಖೆಗಳಲ್ಲೂ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ನರೇಂದ್ರ ಮೋದಿ ಅವರು ಚುನಾವಣಾ ಭಾಷಣದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ 10% ಕಮಿಷನ್‌ ಸರ್ಕಾರ ಎಂದು ಆರೋಪ ಮಾಡಿದಾಗ ಎಲ್ಲರೂ ಅದಕ್ಕೆ ಪ್ರಚಾರ ನೀಡಿದರು, ಯಾರು ಅವರ ಬಳಿ ದಾಖಲೆ ಕೇಳಿಲ್ಲ. ಈಗ ಗುತ್ತಿಗೆದಾರರ ಸಂಘದವರು ಸರ್ಕಾರದ ಭ್ರಷ್ಟಾಚಾರವನ್ನು ಸಾಬೀತು ಮಾಡಲು ಸಿದ್ಧರಿದ್ದಾರೆ. ತನಿಖೆ ಆಗಬೇಕೋ ಬೇಡವೋ?

ಬಿಜೆಪಿ ನಾಯಕರು ತಮ್ಮ ಭ್ರಷ್ಟಾಚಾರವನ್ನು ಯಾವ ರೀತಿ ಸಮರ್ಥನೆ ಮಾಡಿಕೊಳ್ಳುತ್ತಾರೆ ಎಂಬುದು ಮುಖ್ಯವಲ್ಲ. ಬಿಜೆಪಿ ಆರೋಪಿ ಸ್ಥಾನದಲ್ಲಿರುವ ಪಕ್ಷ. ಅವರ ಹೇಳಿಕೆಗಳಿಗೆ ಬೆಲೆ ಕೊಡುವ ಅಗತ್ಯವಿಲ್ಲ. ಮುಖ್ಯಮಂತ್ರಿಗಳು ಗುತ್ತಿಗೆದಾರರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು, ಆದರೆ ಅವರು ಮಾತಿಗೆ ತಪ್ಪಿದ್ದಾರೆ ಅಧಿಕಾರಿಗಳು ಮುಖ್ಯಮಂತ್ರಿಗಳ ಮಾತು ಕೇಳುತ್ತಿಲ್ಲ ಎಂದು ಕೆಂಪಣ್ಣನವರು ಹೇಳಿದ್ದಾರೆ.
ಕಮಿಷನ್‌ 40% ಇಂದ 50% ಗೆ ಏರಿಕೆಯಾಗಿದೆ
ಬಿಬಿಎಂಪಿ ಗುತ್ತಿಗೆದಾರರು ನಿನ್ನೆ ಪತ್ರಿಕಾಗೋಷ್ಠಿ ಮಾಡಿ ಕಮಿಷನ್‌ 40% ಇಂದ 50% ಗೆ ಏರಿಕೆಯಾಗಿದೆ ಎಂದು ಹೇಳಿದ್ದಾರೆ. ಕೆಲವೆಡೆ 100% ಕಮಿಷನ್‌ ವ್ಯವಹಾರ ಕೂಡ ನಡೆಯುತ್ತಿದೆ.
ಲಿಂಗಸೂರು, ದೇವದುರ್ಗದಲ್ಲಿ ಕಾಮಗಾರಿಯನ್ನೇ ಮಾಡದೆ ಬಿಲ್‌ ತೆಗೆದುಕೊಂಡಿದ್ದಾರೆ ಎಂಬ ಆರೋಪ ಇದೆ. ನ್ಯಾಯಾಂಗ ತನಿಖೆ ನಡೆದರೆ ಈ ಎಲ್ಲಾ ವಿಚಾರಗಳು ಹೊರಬರುತ್ತದೆ. ಅನ್ನಭಾಗ್ಯ ಅಕ್ಕಿ ವಿತರಣೆ ಬಗ್ಗೆ ಉಮೇಶ ಕತ್ತಿ ಅವರು ನೀಡಿರುವ ಹೇಳಿಕೆ ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಕೇಂದ್ರ ಸರ್ಕಾರ ಹೇಳಿದರೆ ಅಕ್ಕಿ ಕೊಡುವುದನ್ನು ನಿಲ್ಲಿಸುತ್ತೇವೆ ಎಂದು ಅವರು ಹೇಳಿದ್ದಾರೆ, ಅಂದರೆ ಇವರಿಗೆ ಬಡವರ ಬಗ್ಗೆ ಕಾಳಜಿ ಇಲ್ಲವೇ?

ಅಪರಾಧಿ ಸ್ಥಾನದಲ್ಲಿರುವವರಿಂದ ಸಲಹೆ ಪಡೆಯಬೇಕೋ ಅಥವಾ ದೂರುದಾರರಿಂದ ಸಲಹೆ ಪಡೆಯಬೇಕೋ? ಸರ್ಕಾರ ಭ್ರಷ್ಟಾಚಾರ ಆರೋಪ ಎದುರಿಸುತ್ತಿದೆ, ಹಾಗಾಗಿ ಸರ್ಕಾರದ ವಿರುದ್ಧ ದೂರು ನೀಡಿದವರು ಏನು ಒತ್ತಾಯ ಮಾಡುತ್ತಿದ್ದಾರೆ ಅದನ್ನು ಮಾಡಿ. ತಪ್ಪಿಸಿಕೊಳ್ಳೋಕೆ ಯಾಕೆ ನೋಡುತ್ತೀರಾ?

More News