CM SILENCE ON SURUGA SRI CASE: ಮುರುಘಾ ಶ್ರೀಗಳ ಮೇಲೆ ಎಫ್.ಐ.ಆರ್: ತನಿಖೆಯ ನಂತರ ಸತ್ಯ ಹೊರ ಬೀಳಲಿದೆ: ಮುಖ್ಯಮಂತ್ರಿ

ಬೆಂಗಳೂರು: ಮುರುಘಾ ಶ್ರೀಗಳ ಮೇಲೆ ಪೋಸ್ಕೊ ಅಡಿ ಎಫ್.ಐ.ಆರ್. ದಾಖಲಾಗಿದ್ದು, ತನಿಖೆಯ ನಂತರ ಸತ್ಯ ಹೊರಬೀಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಆರ್ ಟಿ ನಗರದ ತಮ್ಮ ನಿವಾಸದ ಬಳಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯವಿದೆ. ತನಿಖೆ ಮಾಡಿದ ನಂತರ ಸತ್ಯ ಹೊರಗೆ ಬರಲಿದೆ ಎಂದರು.
ಇದೊಂದು ಪ್ರಮುಖ ಪ್ರಕರಣ. ಪೋಸ್ಕೊ ಪ್ರಕರಣವೂ ಆಗಿದೆ ಹಾಗೂ ಚಿತ್ರದುರ್ಗದಲ್ಲಿ ಕಿಡ್ನಾಪ್ ಪ್ರಕರಣವೂ ದಾಖಲಾಗಿದೆ. ಎರಡೂ ಪ್ರಕರಣಗಳನ್ನು ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ನಾವು ಮಾತನಾಡುವುದಾಗಲಿ, ವ್ಯಾಖ್ಯಾನ ಮಾಡುವುದಾಗಲಿ ತನಿಖೆಯ ದೃಷ್ಟಿಯಿಂದ ಸರಿಯಲ್ಲ.

ಮಳೆ: ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ
ಅತಿ ಹೆಚ್ಚು ಮಳೆಯಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಇಂದು ಸಂಜೆ ಮಾತನಾಡಿ, ಸ್ಥಿತಿಗತಿ ನೋಡಿ ಹೆಚ್ವಿನ ಪರಿಹಾರ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಶೀಘ್ರ ನಿರ್ಣಯ
ಚಾಮರಾಜಪೇಟೆ ಈದ್ಗಾ ಮೈದಾನದ ಬಗ್ಗೆ ಗೊಂದಲ ಏನಿಲ್ಲ. ಗಣೇಶೋತ್ಸವ ಆಚರಿಸುವ ಬಗ್ಗೆ ಕಂದಾಯ ಸಚಿವರು ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ಅರ್ಜಿಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅದಾದ ಕೂಡಲೇ ನಿರ್ಣಯ ಮಾಡುತ್ತೇವೆ ಎಂದರು.

More News

You cannot copy content of this page