ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಶರಣರ ಲೈಂಗಿಕ ಕಿರುಕುಳ ಪ್ರಕರಣದ ಇಬ್ಬರು ಬಾಲಕಿ ಸಂತ್ರಸ್ಥರನ್ನು ಮೈಸೂರಿನಿಂದ ಚಿತ್ರದುರ್ಗಕ್ಕೆ ಇಂದು ಬೆಳಗಿನ ಜಾವ ಕರೆತರಲಾಯಿತು.
ಚಿತ್ರದುರ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸುಪರ್ಧಿಗೆ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಹಸ್ತಾಂತರಿಸಿದ್ದಾರೆ. ಅವರನ್ನು ಇಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಎಲ್ಲಾ ಸಾಧ್ಯತೆಗಳಿವೆ. ನಂತರ ಅವರನ್ನು ಜಿಲ್ಲಾ ನ್ಯಾಯಾಧೀಶರ ಎದುರು ಹಾಜರು ಪಡಿಸಬಹುದು ಎಂದು ಮೂಲಗಳು ತಿಳಿಸಿವೆ.

ಮೈಸೂರು ಸಮಿತಿ ನೀಡಿದ ಶಿಫಾರಸ್ಸು ಆದರಿಸಿ ನಜರಾಬಾದ್ ಪೊಲೀಸರು ಫೋಸ್ಕೋ ಅಡಿ ಪ್ರಕರಣವನ್ನು ದಾಖಲು ಮಾಡಿದ್ದರು. ಈ ಪ್ರಕರಣವನ್ನು ಇದೀಗ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.