ರಾಮನಗರ: ಚಲಿಸುತ್ತಿದ್ದ ಕಾರಿನ ಮೇಲೆ ಆಲದ ಮರ ಉರುಳಿಬಿದ್ದು ದುರ್ಮರಣಕ್ಕೀಡಾದ ಬಿಡದಿಯ ಇಟ್ಟಮಡು ನಿವಾಸಿ ಬೋರೆಗೌಡರ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ದುಃಖತಪ್ತ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಬೆಳಗ್ಗೆಯೇ ಮಾಗಡಿ ಶಾಸಕ ಮಂಜುನಾಥ್ ಅವರೊಂದಿಗೆ ಬೋರೇಗೌಡರ ನಿವಾಸಕ್ಕೆ ಧಾವಿಸಿದ ಮಾಜಿ ಮುಖ್ಯಮಂತ್ರಿಗಳು; ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರಲ್ಲದೆ, ಅವರಿಗೆ 5 ಲಕ್ಷ ರೂಪಾಯಿಯ ನೆರವಿನ ಚೆಕ್ ಹಸ್ತಾಂತರ ಮಾಡಿದರು.
ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ ಎಂದು ಮನೆಯವರಿಗೆ ಧೈರ್ಯ ತುಂಬಿದ ಅವರು, ಕುಟುಂಬದ ಸ್ಥಿತಿಗತಿಗಳನ್ನು ಕೇಳಿ ತಿಳಿದುಕೊಂಡರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಕುಮಾರಸ್ವಾಮಿ ಅವರು; ನಿನ್ನೆಯ ದಿನ ಅವಘಡದಲ್ಲಿ ಬೋರೆಗೌಡರು ನಿಧನ ಹೊಂದಿದ್ದರು. ಅವರದ್ದು ಕಷ್ಟಪಟ್ಟು ಜೀವನ ಮಾಡುತ್ತಿರುವ ಕುಟುಂಬ. ಸರಕಾರದ ವತಿಯಿಂದ 5 ಲಕ್ಷ ರೂ. ಪರಿಹಾರ ನೀಡಲಾಗಿದೆ.

ನಮ್ಮ ಒಡನಾಟದಲ್ಲಿ ಬೋರೇಗೌಡರು ಇದ್ದರು. ನಮ್ಮ ಜತೆಗೂಡಿ ಕೆಲಸ ಮಾಡುತ್ತಿದ್ದರು. ಅವರ ನಿಧನ ಅತ್ಯಂತ ನೋವಿನ ಸಂಗತಿ ಎಂದು ಹೇಳಿದರು.
#rain death #bore gowda #hd kumaraswamy #former cm #ramnagara




