ATTACK ON SADHUS: ಮಕ್ಕಳ ಕಳ್ಳರೆಂದು ಭಾವಿಸಿ ನಾಲ್ವರು ಸಾಧುಗಳ ಮೇಲೆ ಹಲ್ಲೆ ನಡೆಸಿದ ಸಾರ್ವಜನಿಕರು

ಮುಂಬೈ: ಇತ್ತೀಚಿನ ದಿನಗಳಲ್ಲಿ ಮಕ್ಕಳ ಕಳ್ಳರ ಬಗ್ಗೆ ಕೆಲವೊಂದು ಫೇಕ್ ವಿಡಿಯೋ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಲೇ ಇರುತ್ತವೆ. ಆದರೆ, ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಮಕ್ಕಳ ಕಳ್ಳರೆಂದು ಭಾವಿಸಿ ನಾಲ್ವರು ನಾಗಸಾಧುಗಳ ಮೇಲೆ ಗುಂಪೊಂದು ಹಲ್ಲೆ ಮಾಡಿದೆ.
ಮುಂಬೈನ ಸಾಂಗ್ಲಿ ಜಿಲ್ಲೆಯಾ ಲಾವಾನಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಾಧುಗಳ ಮೇಲೆ ಜನರ ಗುಂಪೊಂದು ಹಲ್ಲೆ ಮಾಡಿರೋ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜನರು ಕೋಲಿುಗಳಿಂದ ಮನಬಂದಂತೆ ಥಳಿಸಿದ್ದಾರೆ.
ಈ ಬಗ್ಗೆ ಯಾವುದೇ ದೂರು ಸದ್ಯಕ್ಕೆ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ನಾಲ್ವರು ಸಾಧುಗಳು ಉತ್ತರ ಪ್ರದೇಶದ ಮಥುರಾದಿಂದ ಆಗಮಿಸಿದ್ದರಂತೆ. ದೇವರ ದರ್ಶನಕ್ಕಾಗಿ ಬಿಜಾಪುರದಿಂದ ಪಂಡರಪುರಕ್ಕೆ ಹೋಗುತ್ತಿದ್ದರಂತೆ. ಅವರ ಭಾಷೆ ಅರ್ಥವಾಗದ ಕಾರಣ ಮಕ್ಕಳ ಕಳ್ಳರೆಂದು ಭಾವಿಸಿ ಥಳಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಹಲ್ಲೆಗೊಳಗಾದ ಸಾಧುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಪೊಲೀಸರು ಇದುವರೆಗೂ ತಮಗೆ ಯಾವುದೇ ದೂರು ಬಂದಿಲ್ಲ. ಆದರೆ, ವಿಡಿಯೋವನ್ನು ಪರಿಶೀಲಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

#maharastra #sadhus #public attack #child thief

More News