ENFORCEMENT DIRECTORATE SUMMONS: ಇಡಿಯಿಂದ ಮತ್ತೆ ಸಮನ್ಸ್: ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಡಿ ಕೆ ಶಿವಕುಮಾರ್

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಮತ್ತೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ಜಾರಿ ಮಾಡಿರು ಕುರಿತು ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಡಿ ಇಲಾಖೆ ನೀಡಿರುವ ಸಮನ್ಸ್ ಬಗ್ಗೆ ಟ್ವಿಟ್ಟರ್ ಮೂಲಕ ಬೇಜಾರು ವ್ಯಕ್ತಪಡಿಸಿದ ಡಿಕೆ ಶಿವಕುಮಾರ್, ಭಾರತ್ ಜೋಡೋ ಯಾತ್ರೆ ಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿದೆ, ಇಂತಹ ಸಂದರ್ಭದಲ್ಲಿ ನನಗೆ ಮತ್ತೊಮ್ಮೆ ಇಡಿ ಸಮನ್ಸ್‌ ನೀಡಿದೆ.

ನಾನು ತನಿಖೆಗೆ ಸಂಪೂರ್ಣವಾಗಿ ಸಹಕರಿಸಲು ಸಿದ್ಧನಿದ್ದೇನೆ, ಆದರೆ ಮೇಲಿಂದ ಮೇಲೆ ಕಿರುಕುಳ ನೀಡಲಾಗುತ್ತಿದೆ, ಇದರಿಂದ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಟ್ವೇಟರ್ ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

More News