ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರ ಸ್ಥಾನಕ್ಕೆ ಇಂದು ಸಾಂಕೇತಿಕವಾಗಿ ಚುನಾವಣೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಎರಡನೇ ಅವಧಿಗೆ ಡಿ.ಕೆ.ಶಿವಕುಮಾರ್ ಆಯ್ಕೆ ಆಗೋದು ಬಹುತೇಕ ಖಚಿತವಾಗಿದೆ.
ಈವರೆಗೂ ಅಧ್ಯಕ್ಷ ಸ್ಥಾನಕ್ಕೆ ಬೇರೆ ಯಾರೊಬ್ಬರು ನಾಮಪತ್ರ ಸಲ್ಲಿಸಿಲ್ಲಾ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 2ವರ್ಷ ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ಬೈಲಾ ಪ್ರಕಾರ ಇಂದು ಚುನಾವಣೆ ನಡೆಯಲಿದೆ. ಮಧ್ಯಾಹ್ನ 3-30 ಕ್ಕೆ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಸಾಂಕೇತಿಕ ಚುನಾವಣೆ ಆಯೋಜನೆ ಮಾಡಲಾಗಿದೆ.
ಮಧ್ಯಾಹ್ನ ಸಭೆ ಸೇರಿ ಒನ್ ಲೈನ್ ರೆಸ್ಯೂಲೂಷನ್ ಪಾಸ್ ಮಾಡುವ ಸಾಧ್ಯತೆ ಇದೆ. ಕಾಂಗ್ರೆಸ್ ಶಾಸಕರು, ಪರಿಷತ್ ಸದಸ್ಯರು, ಕೆಪಿಸಿಸಿ ಸದಸ್ಯರು, ವಿವಿಧ ಘಟಕಗಳ ಅಧ್ಯಕ್ಷರು ಸೇರಿದಂತೆ 479 ಮತದಾರರು ಮತದಾನಕ್ಕೆ ಅರ್ಹರಾಗಿದ್ದಾರೆ.

ಎಐಸಿಸಿಯು ನೀಡಿರುವ ಸಂದೇಶದ ಅನುಸಾರ ಒಂದೇ ಸಾಲಿನಲ್ಲಿ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ತಿಳಿದು ಬಂದಿದೆ. ಈಗಾಗಲೇ ಡಿ.ಕೆ.ಶಿವಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ಮುಂದುವರೆಸಲು ತೀರ್ಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಡಿ ಕೆ ಶಿವಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.




