SENIOR ACTOR ANANT NAG: ಮೋದಿ ಜನ್ಮದಿನ: ಸಸಿ ನೆಟ್ಟು ಶುಭ ಹಾರೈಸಿದ ನಟ ಅನಂತನಾಗ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಹುಟ್ಟುಹಬ್ಬದ ಅಂಗವಾಗಿ ಹಿರಿಯ ನಟ ಮತ್ತು ಮಾಜಿ ಸಚಿವ ಅನಂತನಾಗ್ ಅವರು ಕ್ಷೇತ್ರದ ಶಾಸಕ ಮತ್ತು ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರ ಜತೆಗೂಡಿ ಸದಾಶಿವನಗರದ ಪೂಜಾರಿ ಲೇಔಟ್ ನಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗಿಯಾದರು.

ಬಳಿಕ ಮಾತನಾಡಿದ ಅವರು, “ಮೋದಿಯವರು ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಅವರ ನಾಯಕತ್ವವು ದೇಶಕ್ಕೆ ಹೊಸ ಚೈತನ್ಯ ತಂದಿದೆ. ಭಗವಂತನು ಅವರಿಗೆ ಆಯುರಾರೋಗ್ಯ ಕೊಟ್ಟು ಕಾಪಾಡಲಿ” ಎಂದು ಹಾರೈಸಿದರು.

“ಅಶ್ವತ್ಥ ನಾರಾಯಣ ಅವರು ಮಲ್ಲೇಶ್ವರಂ ಕ್ಷೇತ್ರದ ಶಾಸಕರಾಗಿ ನಿರಂತರ ಮೂರು ಅವಧಿಯಿಂದ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರವನ್ನು ಇವರು ಮಾದರಿ ರೀತಿಯಲ್ಲಿ ಅಭಿವೃದ್ಧಿ ಪಡಿಸುತ್ತಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

#Dr c n ashwathnarayan #it bt minister #senior actor anant nag #planted tree #wished modi #prime minister #narendra modi birthday

More News