ಬೆಂಗಳೂರು : ಕಾಲು ನೋವಿನಿಂದ ವಿಶ್ರಾಂತಿ ಪಡೆಯುತ್ತಿರುವ ಹಿರಿಯ ರಾಜಕಾರಣಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ವಿಧಾನಸಭೆಯ ಕಲಾಪ ಮುಗಿದ ಬಳಿಕ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ ಬಳಿಕ ಹಲವು ವಿಚಾರಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು.

ಈ ವೇಳೆ ಮಾಜಿ ಸಚಿವರಾದ ಆರ್ ವಿ ದೇಶಪಾಂಡೆ, ಮಾಜಿ ಶಾಸಕರಾದ ಅಶೋಕ್ ಪಟ್ಟಣ ಮತ್ತಿತರರು ಉಪಸ್ಥಿತರಿದ್ದರು.



#Siddaramaiah #former cm #opposition party leader #former prime minister #h d devegowda #r v deshpande #zameer ahamed khan #meets




