CM MET FORMER PM H D DEVEGOWDA: ಸಂಪುಟದ ಸಹೋದ್ಯೋಗಿಗಳೊಂದಿಗೆ ದೇವೇಗೌಡರ ಆರೋಗ್ಯ ವಿಚಾರಿಸಿದ ಸಿಎಂ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಪದ್ಮನಾಭನಗರದ ಅವರ ನಿವಾಸದಲ್ಲಿಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ. ನಾನು ಮತ್ತು ನನ್ನ ಸಂಪುಟದ ಸಚಿವರು. ಯಜಮಾನರನ್ನ ಭೇಟಿ ಮಾಡಲು ಬಂದಿದ್ದೆವು. ಅವರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಆಗಿದೆ ಎಂದರು.
ಅವರು ನಮ್ಮೊಂದಿಗೆ ಬಹಳ ಅತ್ಮಿಯವಾಗಿ ಲವಲವಿಕೆಯಿಂದ ಮಾತನಾಡಿದರು. ಅವರ ಅನುಭವವನ್ನು ನಮ್ಮೊಂದಿಗೆ ಹಂಚಿಕೊಂಡರು.

ರಾಜ್ಯದ ಅಭಿವೃದ್ಧಿಗೆ ಯಾವೆಲ್ಲ ಒಳ್ಳೆಯ ಕಾರ್ಯಕ್ರಮಗಳನ್ನು ಮಾಡಬೇಕು ಅನ್ನೋ ಬಗ್ಗೆ ಸಲಹೆ ನೀಡಿದರು. ಅವರ ಆರೋಗ್ಯ ಚನ್ನಾಗಿ ಇರಲಿ. ನೂರು ಕಾಲ ಬಾಳಲಿ ರಾಜ್ಯಕ್ಕೆ ಅವರ ಮಾರ್ಗದರ್ಶನ ಸಿಗಲಿ ಎಂದು ಸಿಎಂ ಹಾರೈಸಿದರು.

ಈ ಸಂದರ್ಭದಲ್ಲಿ ಸಚಿವರಾದ ಕೆ.ಗೋಪಾಲಯ್ಯ, ಆರ್.ಅಶೋಕ್, ಬೈರತಿ ಬಸವರಾಜ್, ಮುನಿರತ್ನ, ವಿ.ಸೋಮಣ್ಣ, ಮಾಧುಸ್ವಾಮಿ ಹಾಗೂ ಇತರರು ಹಾಜರಿದ್ದರು.

#cm basavaraj bommai #former prime minister #h d devegowda #r ashok #cabinet ministers #madhuswamy #v somanna #munirathna

More News