ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ದೆಹಲಿ ಪ್ರವಾಸ ಕೈಗೊಂಡಿದ್ದಾರೆ.ಈ ವೇಳೆ ಹಣಕಾಸು,ಲೋಕೋಪಯೋಗಿ,ಆರೋಗ್ಯ ಸೇರಿದಂತೆ ಹಲವಾರು ಸಚಿವರನ್ನು ಅವರು ಭೇಟಿಯಾಗಲಿರುವುದಾಗಿ ಅವರು ತಿಳಿಸಿದರು.
ಇಂದು ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಯಾಗಿ ಲೋಕೋಪಯೋಗಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಸ್ತಾವನೆಗಳ ಬಗ್ಗೆ ಚರ್ಚೆ ನಡೆಸಲಿರುವುದಾಗಿ ತಿಳಿಸಿದರು.ವಸತಿ ಹಾಗೂ ನಗರಾಭಿವೃದ್ಧಿ ಸಚಿವರನ್ನೂ ಭೇಟಿಯಾಗಲಿದ್ದು, ರಾಜ್ಯದ ವಿವಿಧ ಪ್ರಸ್ತಾವನೆಗಳ ಬಗ್ಗೆ ಚರ್ಚೆ ನಡೆಸಿದ್ದೇನೆ.ಹಣಕಾಸಿನ ಸಚಿವರ ಬಳಿ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಅನುದಾನ ಬಿಡುಗಡೆ ಸಲುವಾಗಿ ದೆಹಲಿಗೆ ತೆರಳಲಿರುವುದಾಗಿ ಅವರು ಹೇಳಿದರು.
ಬಾಕಿ ಉಳಿದಿರುವ ಖಾತೆಗಳ ಹಂಚಿಕೆ ಮತ್ತು ಖಾತೆ ಬದಲಾವಣೆ ಖ್ಯಾತೆ ಬಗ್ಗೆ ಕೇಂದ್ರದ ವರಿಷ್ಠರ ಜೊತೆಎ ಚೆರ್ಚಿಸುತ್ತಿಲ್ಲ.ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಜೋಶಿ ಮಗಳ ಆರತಕ್ಷತೆಯಲ್ಲಿ ಪಾಲ್ಗೊಳ್ಳಲು ಬರುವ ಸಾಧ್ಯತೆ ಇದೆ.ಆಗ ಪಕ್ಷ ಹಾಗೂ ಸರ್ಕಾರದ ವಿಚಾರ ಗಳನ್ನು ಚೆರ್ಚಿಸಲು ಸಾಧ್ಯವಿಲ್ಲವೆನ್ನುವ ಮೂಲಕ ಸಚಿವ ಸಂಪುಟ ವಿಸ್ತರಣೆ, ಖಾತೆ ಬದಲಾವಣೆ ಸದ್ಯಕ್ಕೆ ಮಾಡುವುದಿಲ್ಲ ವೆಂಬುದನ್ನು ಸ್ಪಷ್ಟಪಡಿಸಿದರು.

ವಸತಿ ಮತ್ತು ನಗರಾಭಿವೃದ್ಧಿ ಸಂಬಂಧಿಸಿದಂತೆ ಕೇಂದ್ರ ಸಚಿವರು ಬೆಂಗಳೂರಿಗೆ ಬಂದಾಗ ಹಲವಾರು ಯೋಜನೆಗಳ ಬಗ್ಗೆ ಚರ್ಚೆ ಯಾಗಿತ್ತು.ನಗರ ವಸತಿ ಹಾಗೂ ಮೆಟ್ರೋ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಾ ಗುವುದು.ಕೇರಳದಲ್ಲಿ ನಿಫಾ ವೈರಾಣು ಕುರಿತು ಸಂಪೂ ರ್ಣ ಮಾಹಿತಿ ಪಡೆಯಲು ತಜ್ಞರಿಗೆ ಸೂಚಿಸಲಾಗಿದೆ. ಕೇರಳ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಅಂತೆಯೇ ನಿಗಾ ಇಡಲಾಗಿದೆ ಎಂದರು.
ಬೆಂಗಳೂರು ನಗರದಲ್ಲಿ ಗುಂಡಿಗಳನ್ನು ಮುಚ್ಚುವ ಸಂಬಂಧ ಸಮರೋಪಾದಿಯಲ್ಲಿ ಕಾರ್ಯನಿರ್ವ ಹಿಸಲು ಬಿ.ಬಿ.ಎಂ.ಪಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.ಮಳೆ ಕಡೆಮೆಯಾದರೆ ಗುಂಡಿ ಮುಚ್ಚುವ ಕಾರ್ಯ ಚುರುಕಾಗಲಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.




