ಬೀದರ್ : ಕಾಂಗ್ರೆಸ್ಸಿಗರು ನಡೆಸಿದಂತಹ ಪೇ ಸಿಎಂ ಅಭಿಯಾನ ಅವರಿಗೇ ತಿರುಗುಬಾಣವಾಗಲಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.
ಬೀದರ್ ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರ ಕಾಲದಲ್ಲಿ ತುಂಬಾ ಹಗರಣಗಳು ನಡೆದಿದ್ದು, ಅದನ್ನು ತನಿಖೆ ನಡೆಸಲಾಗುವುದು ಆದ್ದರಿಂದ ಪೇ ಸಿಎಂ ಅಭಿಯಾನ ಅವರಿಗೆ ತಿರುಗುಬಾಣವಾಗಲಿದೆ ಎಂದರು.
ಈ ದೇಶದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದೆ, ರಾಹುಲ್ ಗಾಂಧಿ ಮೂಲಕ ತನ್ನ ಅಸ್ತಿತ್ವ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದ ಅವರು, ಈ ದೇಶದಲ್ಲಿ 60 ವರ್ಷಗಳ ಕಾಲ ಆಡಳಿತ ಮಾಡಿದ ಪಕ್ಷ ಕಾಂಗ್ರೆಸ್, ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾರು ಆಗಬೇಕು ಎಂದು ಹುಡುಕಲು ಆಗುತ್ತಿಲ್ಲಾ, ಹೀಗಾಗಿ ಅವರಿಗೆ ಭಾರತೀಯ ಜನತಾ ಪಾರ್ಟಿ ಹೆದರಿಕೊಳ್ಳುವ ಪ್ರಶ್ನೆ ಇಲ್ಲಾ ಎಂದು ತಿಳಿಸಿದರು.

ಅವರು ಏನೇ ಮಾಡಿದ್ರು ಜನರು ಕಾಂಗ್ರೆಸ್ ಪಕ್ಷವನ್ನು ಮರೆಯುತ್ತಿದ್ದಾರೆ, ಮುಂಬರುವ ದಿನಗಳಲ್ಲಿ ರಾಜ್ಯ ಸೇರಿದಂತೆ ದೇಶದಲ್ಲಿ ಕಾಂಗ್ರೆಸ್ ದೂಳಿಪಟವಾಗುತ್ತದೆ, ಸಿದ್ದರಾಮಯ್ಯ ಹಾಗೂ ಡಿಕೆಶಿ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ, ಆದರೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದರು.




