ELECTRICITY BILL HIKE FROM TODAY: ಇಂದಿನಿಂದ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್ ! ಪರಿಷ್ಕೃತ ವಿದ್ಯುತ್ ದರ ಜಾರಿ

ಬೆಂಗಳೂರು :ಕಳೆದ ಮೂರು ತಿಂಗಳ ಹಿಂದೆಯಷ್ಟೇ ವಿದ್ಯುತ್ ದರ ಏರಿಸಿ ಜನಸಾಮಾನ್ಯರಿಗೆ ಏರಿಕೆ ಬರೆ ನೀಡಿದ್ದ ರಾಜ್ಯ ಸರ್ಕಾರ ಮತ್ತೆ ಮೂರು ತಿಂಗಳಿಗೆ ದರ ಏರಿಕೆ ಮಾಡಿದ್ದು, ಅದು ಇಂದಿನಿಂದ ಜಾರಿಗೆ ಬರಲಿದೆ.
ಪೆಟ್ರೋಲ್, ಡೀಸಲ್, ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರು ಇಂದಿನಿಂದ ಮತ್ತೆ ವಿದ್ಯುತ್ (ELECTRICITY)ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ರಾಜ್ಯದ ಎಲ್ಲಾ ಎಸ್ಕಾಂಗಳು ಸಲ್ಲಿಸಿದ ಮನವಿಯ ಮೇರೆಗೆ 23 ರಿಂದ 43 ಪೈಸೆ ಹೆಚ್ಚಿಸಿದ ಕೆಇಆರ್ ಸಿ (KERC) ಈ ಆದೇಶ ಹೊರಡಿಸಿದೆ.
ಈ ಬೆಲೆ ಏರಿಕೆಯನ್ನು ರಾಜ್ಯ ಸರ್ಕಾರ ಹಾಗೂ ಇಂಧನ ಸಚಿವ ಸುನೀಲ್ ಕುಮಾರ್ ಸಮರ್ಥನೆ ಮಾಡಿದ್ದು, ಬೆಲೆ ಏರಿಕೆ ಅನಿವಾರ್ಯ ಎಂದಿದ್ದಾರೆ. ವಿದ್ಯುತ್ ಸರಬರಾಜು ಕಂಪನಿಗಳ ನಷ್ಟ ಸರಿದೂಗಿಸಲು ದರ ಏರಿಕೆ ಮಾಡಲಾಗಿದ್ದು, ವಿದ್ಯುತ್ ಸರಬರಾಜು ಕಂಪನಿಗಳಿಂದ ಇಂದಿನಿಂದ ಹೊಸ ವಿದ್ಯುತ್ ದರ ಜಾರಿಯಾಗಲಿದೆ.


ಪ್ರತಿ ಮೂರು ತಿಂಗಳಿಗೊಮ್ಮೆ ಪರಿಸ್ಕರಣೆ ಮಾಡಬೇಕು, ಮಾಡಲಾಗಿದೆ. ಎಂಬುದು ಸರ್ಕಾರದ ವಾದ. ಉತ್ಪಾದನಾ ವೆಚ್ಚ ಹೆಚ್ಚಾದರೆ ವಿದ್ಯುತ್ ದರ ಏರಿಸಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೋಟೆಲ್ ಮಾಲೀಕರ ಸಂಘದ ವಿರೋಧ
ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆಯನ್ನು ರಾಜ್ಯ ಹೋಟೆಲ್ ಮಾಲೀಕರ ಸಂಘ ತೀವ್ರವಾಗಿ ಖಂಡಿಸಿದೆ. ವಿದ್ಯುತ್ ಮೇಲಿನ ತೆರಿಗೆ ಶೇಕಡಾ 9 ರಷ್ಟು ಇದೆ, ಇದನ್ನು ಶೇಕಡಾ 4ಕ್ಕೆ ಇಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಮತ್ತೆ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಲಾಗುವುದು ಎಂದು ಸಂಘ ತಿಳಿಸಿದೆ.

ಕೋರೋನಾದಿಂದ ಬಳಿಕ ಕೆಲವು ತಿಂಗಳಿಂದ ಹೋಟೇಲ್ ಉದ್ಯಮ ಚೇತರಿಸಿಕೊಳ್ಳುತ್ತಿದೆ. ಮತ್ತೆ ವಿದ್ಯುತ್ ದರ ಏರಿಸಿದರೆ ಸಮಸ್ಯೆ ಏದುರಾಗಲಿದೆ ಎಂಬುದು ಹೋಟೆಲ್ ಮಾಲೀಕರ ವಾದವಾಗಿದೆ.

#kerc #electricity rate hike #rate hike #minister sunil kumar #hotel owners #price hike #common people effect

More News

You cannot copy content of this page