ತಮಿಳಿನ ‘9 ಥಿರದರ್ಗಳ್’ ಸಿನಿಮಾದ ಮೂಲಕ ಕಾಲಿವುಡ್ ಸಿನಿ ಪ್ರಪಂಚಕ್ಕೆ ಕಾಲಿಟ್ಟಿದ್ದ ಆಕಾಂಕ್ಷಾ ಮೋಹನ್ (30) ವರ್ಷ ವಯಸ್ಸಿನಲ್ಲೇ ತಮ್ಮ ಜೀವನ ಪಯಣ ಮುಗಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ ಸೆ.28 ರಂದು ಬುಧವಾರ ಬೆಳಗ್ಗೆ ಮುಂಬೈನ ವೆರ್ಸೋವಾದಲ್ಲಿರುವ ಹೋಟೆಲ್ ಆಕಾಂಕ್ಷಾ ರೂಮ್ ಬುಕ್ ಮಾಡಿದ್ದಾರೆ. ಎರಡು ದಿನಗಳವರೆಗೂ ಅವರು ರೂಮ್ ಬುಕ್ ಮಾಡಿದ್ದು, ಎರಡು ದಿನಗಳ ಬಳಿಕವೂ ರೂಮ್ ಬಾಗಿಲು ತೆರೆಯದೇ ಇರುವ ಕಾರಣಕ್ಕಾಗಿ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಬಂದ ಬಳಿಕ ಬಾಗಿಲು ತೆರೆದಾಗ ಆಕಾಂಕ್ಷಾ ಮೃತದೇಹ ಪತ್ತೆಯಾಗಿದೆ. ಅಲ್ಲಿಯೇ ಇದ್ದ ಡೆತ್ ನೋಟ್ ನಲ್ಲಿ ನನಗೆ ನೆಮ್ಮದಿ ಬೇಕು. ಹಾಗಾಗಿ ಸಾಯುತ್ತಿದ್ದೇನೆ. ನನ್ನ ಕ್ಷಮಿಸಿ, ನನ್ನ ಸಾವಿಗೆ ಯಾರೂ ಕಾರಣರಲ್ಲ’ ಎಂದು ಬರೆದಿದ್ದಾರೆ.

ಮುಂಬೈ ನಗರದ ಲೋಖಂಡವಾಲಾ ಪ್ರದೇಶದ ಯಮುನಾ ನಗರದ ಸೊಸೈಟಿಯಲ್ಲಿ ಆಕಾಂಕ್ಷಾ ಒಂಟಿಯಾಗಿ ವಾಸವಿದ್ದರು ಎಂದು ಹೇಳಲಾಗುತ್ತಿದೆ. ಅಲ್ಲದೇ, ಮಾನಸಿಕ ಖಿನ್ನತೆಗೂ ಅವರು ಒಳಗಾಗಿದ್ದರಂತೆ. ಈ ಕಾರಣದಿಂದಾಗಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ.

ಎರಡು ವಾರಗಳ ಹಿಂದೆಯಷ್ಟೇ ಬಿಡುಗಡೆ ಆಗಿರುವ ಹಿಂದಿ ಸಿನಿಮಾ ‘ಸಿಯಾ’ದ ನಾಯಕಿ ಹಾಗೂ ತಮಿಳು ಚಿತ್ರ ರಂಗದ ನಟಿ ಆಕಾಂಕ್ಷಾ ಮೋಹನ್ ಹಿಂದಿ ಮತ್ತು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಿನಿಮಾ ರಂಗದಲ್ಲಿ ಮಾತ್ರವಲ್ಲ ಮಾಡೆಲಿಂಗ್ ಕ್ಷೇತ್ರದಲ್ಲೂ ಇವರು ತಮ್ಮದೇ ಆದ ಹೆಸರು ಮಾಡಿದ್ದರು.
#AKAKSHA MOHA #ACTRESS #MODEL #COMMITTED SUICIDE #SIYA HINDHI FILM HEROINE #MUMBAI