ನವದೆಹಲಿ: ಅಕ್ಟೋಬರ್ 7 ರಂದು(ನಾಳೆ) ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ ಡಿ) ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಅವರ ಸಹೋದರ ಸಂಸದ ಡಿ ಕೆ ಸುರೇಶ್ ಅವರಿಗೆ ಮತ್ತೆ ಸಮನ್ಸ್ ಜಾರಿ ಮಾಡಿದೆ.
ಈ ಮೊದಲು ದಿನಾಂಕ 23-09-2022 ರಂದು ಇವರಿಬ್ಬರಿಗೂ ಅಕ್ಟೋಬರ್ 7 ರಂದು ವಿಚಾರಣೆಗೆ ಬರುವಂತೆ ಇ ಡಿ ಸಮನ್ಸ್ ಜಾರಿ ಮಾಡಿತ್ತು. ಆದರೆ ಭಾರತ್ ಜೋಡೋ ಪಾದಯಾತ್ರೆ ಹಿನ್ನೆಲೆಯಲ್ಲಿ ಕಾಲಾವಕಾಶ ನೀಡುವಂತೆ ಶಿವಕುಮಾರ್ ಹಾಗೂ ಸುರೇಶ್ ಅವರು ಪತ್ರ ಬರೆದು ಕೋರಿದ್ದರು.

ಆದರೆ, ಸಮಯಾವಕಾಶ ನೀಡುವುದನ್ನು ನಿರಾಕರಿಸಿರುವ ಇ ಡಿ 7-10-2022 ರಂದು ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ದಿನಾಂಕ 05-10-2022 ರಂದು ಮತ್ತೊಂದು ನೋಟಿಸ್ ಜಾರಿ ಮಾಡಿದೆ.
ಪಕ್ಷದ ಮುಖಂಡರ ಜತೆ ಸಮಾಲೋಚನೆ ನಡೆಸಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಡಿ ಕೆ ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
#kpcc president #d k shivakumar 3member of parliament #d k Suresh # ed notice #summoned




