ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ರಾಜ್ಯ ಸರ್ಕಾರ ಶೇಕಡಾ 3.75 ರಷ್ಟು ಹೆಚ್ಚಳ ಮಾಡಿದ್ದು, ಇದು ಹಾಲಿ ನೌಕರರು ಮತ್ತು ನಿವೃತ್ತ ನೌಕರರಿಗೆ ಜುಲೈ 1, 2022ರಿಂದಲೇ ಅನ್ವಯವಾಗಲಿದೆ.
ಶೇಕಡಾ 3.75 ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನುಮತಿ ನೀಡಿದ್ದು, ಇದನ್ನು ಅವರು ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.



ಸನ್ಮಾನ್ಯ ಮುಖ್ಯಮಂತ್ರಿ @BSBommai ಅವರು ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ.
— CM of Karnataka (@CMofKarnataka) October 7, 2022
ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 1,282.72 ಕೋಟಿ ರೂಪಾಯಿ ಹೆಚ್ಚುವರಿ ಹೊರೆ ಬೀಳಲಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದ್ದಾರೆ. ಇ್ತತೀಚೆಗೆ ಕೇಂದ್ರ ಸರ್ಕಾರವು ಕೇಂದ್ರ ಸರ್ಕಾರಿ ನೌಕರ ತುಟ್ಟಿ ಭತ್ಯೆ ಮತ್ತು ಡಿಆರ್ ಅನ್ನು ಶೇಕಡಾ 4ರಷ್ಟು ಹೆಚ್ಚಿಸಿತ್ತು.
#state government #employees da hike #cm basavaraj bommai