BUS ACCIDENT: ಸರ್ಕಾರಿ ಬಸ್ ಪಲ್ಟಿ ಚಾಲಕ ಸ್ಥಳದಲ್ಲಿಯೇ ಸಾವು : ಮೂವರ ಸ್ಥಿತಿ ಗಂಭೀರ

ಹುಬ್ಬಳ್ಳಿ: ಇಲ್ಲಿನ ಶೆರೆವಾಡ ಸಮೀಪ ಸರ್ಕಾರಿ ಬಸ್ ವೊಂದು ಪಲ್ಟಿ ಹೊಡೆದ ಪರಿಣಾಮ ಬಸ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟರೆ, 25ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡ ಘಟನೆ ಇಂದು ನಡೆದಿದೆ.
ಬಸ್ ನಲ್ಲಿ ಸಿಲುಕಿದ ಗಾಯಾಳುಗಳ ಆಕ್ರಂದನ ಮುಗಿಮುಟ್ಟಿದ್ದು, ಸ್ಥಳಿಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಬಸ್ ನೊಳಗೆ ಸಿಲುಕಿಕೊಂಡವರ ರಕ್ಷಣೆ ಮಾಡುತ್ತಿದ್ದ ದೃಶ್ಯ ಮನಕಲುಕುವಂತಿತ್ತು.

ಸರ್ಕಾರಿ ಬಸ್ ನ ಟೈರ್ ಬ್ಲಾಸ್ಟ್ ಆಗಿ ಬಸ್ ಪಲ್ಟಿಯಾದ ಪರಿಣಾಮ ಚಾಲಕ ರವೀಂದ್ರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಗೊಂಡಿರುವ 25 ಕ್ಕೂ ಹೆಚ್ಚು ಜನರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಗೊಂಡವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ ಲಕ್ಷ್ಮೇಶ್ವರದಿಂದ ಹುಬ್ಬಳ್ಳಿಗೆ ತೆರಳುತ್ತಿತ್ತು. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

More News