ಅತಿಥೇಯ ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಇಂದು ನಡೆಯಲಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಕ್ಕಾಗಿ ಎರಡು ತಂಡಗಳು ಸಜ್ಜಾಗಿದ್ದು, ಕೊನೆಯ ಪಂದ್ಯವನ್ನು ಗೆದ್ದು ಸರಣಿ ವಶಕ್ಕೆ ಪಡೆಯುವ ನಿಟ್ಟಿನಲ್ಲಿ ಉಭಯ ತಂಡಗಳು ಭರ್ಜರಿ ತಯಾರಿ ಮಾಡಿಕೊಂಡಿವೆ.
ಸರಣಿಯ ಮೊದಲ ಪಂದ್ಯದಲ್ಲಿ ಶಿಖರ್ ಧವನ್ ನೇತೃತ್ವ ಟೀಮ್ ಇಂಡಿಯಾ, 9 ರನ್‌ಗಳ ವಿರೋಚಿತ ಸೋಲು ಕಂಡಿತ್ತು. ಆದರೆ ರಾಂಚಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಕಮ್ ಬ್ಯಾಕ್ ಮಾಡಿದ ಭಾರತ 7 ವಿಕೆಟ್‌ಗಳ ಅದ್ಭುತ ಜಯ ಸಾಧಿಸಿತು. ಶ್ರೇಯಸ್ ಅಯ್ಯರ್ ಹಾಗೂ ಇಶಾನ್ ಕಿಶನ್ ಶತಕದ ಜೊತೆಯಾಟವಾಡಿ ತಂಡಕ್ಕೆ 7 ವಿಕೆಟ್‌ಗಳ ಜಯ ತಂದುಕೊಟ್ಟರು. ಈ ಮೂಲಕ ಟೀಂ ಇಂಡಿಯಾ ಸರಣಿಯಲ್ಲಿ 1-1ರ ಸಮಬಲ ಸಾಧಿಸುವಲ್ಲಿ ಯಶಸ್ಸು ಕಂಡಿತ್ತು.
ಹೀಗಾಗಿ ದೆಹಲಿಯಲ್ಲಿ ನಡೆಯುವ ಅಂತಿಮ ಏಕದಿನ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಸರಣಿಯಲ್ಲಿ ಎರಡೂ ತಂಡಕ್ಕೆ ಬ್ಯಾಟಿಂಗ್ ವಿಭಾಗವೇ ಶಕ್ತಿಯಾಗಿದ್ದು, ಬೌಲರ್‌ಗಳಿಂದ ನಿರೀಕ್ಷಿತ ಪ್ರದರ್ಶನ ಬಂದಿಲ್ಲ. ಎರಡು ಪಂದ್ಯಗಳಲ್ಲಿ ಉಭಯ ತಂಡಗಳ ಬೌಲರ್‌ಗಳು ಹೆಚ್ಚಿನ ರನ್‌ಬಿಟ್ಟುಕೊಟ್ಟಿದ್ದಾರೆ. ಭಾರತದ ಪರ ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸಂಜೂ ಸ್ಯಾಮ್ಸನ್ ಅದ್ಭುತ ಫಾರ್ಮ್‌ನಲ್ಲಿದ್ದರೆ. ಸೌತ್ ಆಫ್ರಿಕಾ ಪರ ಹೆಂಡ್ರಿಕ್ಸ್, ಮಾರ್ಕ್ರಂ, ಕ್ಲಾಸೆನ್ ಹಾಗೂ ಮಿಲ್ಲರ್ ಅವರ ಉತ್ತಮ ಫಾರ್ಮ್ ಪ್ರಮುಖ ಶಕ್ತಿಯಾಗಿದೆ.ಆದ್ದರಿಂದ ಎರಡು ತಂಡಗಳು ತಮ್ಮ ಬ್ಯಾಟಿಂಗ್ ಶಕ್ತಿಯನ್ನೇ ನಂಬಿಕೊಂಡಿವೆ.
ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ
ಆದರೆ ಇಂದು ನಡೆಯಲಿರುವ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಹೆಚ್ಚಿದೆ. ದೆಹಲಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಮಳೆಯಾಗಿದ್ದು, ಇಂದಿನ ಪಂದ್ಯಕ್ಕೂ ಮಳೆ ಅಡ್ಡಿಯಾಗುವ ಆತಂಕವಿದೆ.

ಎರಡು ತಂಡಗಳ ಬಲಾಬಲವನ್ನು ನೋಡುವುದಾದರೆ, ಎರಡೂ ತಂಡಗಳು ಒಟ್ಟು 89 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ದಕ್ಷಿಣ ಆಫ್ರಿಕಾ 50 ಪಂದ್ಯಗಳನ್ನು ಗೆದ್ದಿದರೆ, ಭಾರತ 36 ಪಂದ್ಯಗಳನ್ನು ಗೆದ್ದಿದೆ. ಉಳಿದ 3 ಪಂದ್ಯಗಳು ಮಳೆಯಿಂದ ರದ್ದಾಗಿವೆ. ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಭಾರತ 3 ನೇ ಸ್ಥಾನ, ದಕ್ಷಿಣ ಆಫ್ರಿಕಾ 6 ನೇ ಸ್ಥಾನದಲ್ಲಿದೆ.
ಉಭಯ ತಂಡಗಳು:
ಭಾರತ : ಶಿಖರ್ ಧವನ್ (ನಾಯಕ), ಶ್ರೇಯಸ್ ಅಯ್ಯರ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಅವೇಶ್ ಖಾನ್, ಶಹಬಾಜ್ ಅಹ್ಮದ್, ಮುಖೇಶ್ ಕುಮಾರ್ , ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್.
ದಕ್ಷಿಣ ಆಫ್ರಿಕಾ: ತೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರಿಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಜಾನೆಮನ್ ಮಲನ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಒನ್ರಿಚ್ ನೋಕಿಯಾ, ವೇಯ್ನ್ ಪರ್ನೆಲ್, ಆಂಡಿಲ್ ಪರ್ನೆಲ್, ತಬ್ರೈಜ್ ಶಮ್ಸಿ ತಂಡದಲ್ಲಿದ್ದಾರೆ.
#india #team india #south africa #one day cricket match #series win #roahith sharma