HIGHCOURT CHIEF JUSTICE: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರ್ಲೆ ಪ್ರಮಾಣವಚನ ಸ್ವೀಕಾರ

ಬೆಂಗಳೂರು : ಕರ್ನಾಟಕ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರ್ಲೆ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ನ್ಯಾಯಾಮೂರ್ತಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮುಖ್ಯಮಂತ್ರಿ, ಸಚಿವರು, ಹೈಕೋರ್ಟ್ ನ್ಯಾಯಾಧೀಶರು, ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

#high court chief justice #prasanna balachandra verle #cm basavaraj bommai #governor thawar chand gehlot #oath taking ceremony #rajbhavan

More News