ಬೆಂಗಳೂರು : ಇವರು ಸಾಮರ್ಥ್ಯವಿದ್ದರೂ ಅವಕಾಶ ವಂಚಿತರು.ಅರ್ಹತೆ ಇದ್ದರೂ ಮಾರ್ಗಗೊತ್ತಿಲ್ಲದ ವರು.ಕ್ರೀಡೆಯಲ್ಲಿ ಉನ್ನತ ಮಟ್ಟಕ್ಕೇರುವ ಶಕ್ತಿ ಇದ್ದರೂ ಯಾರೂ ಗುರುತಿಸುವ ಪ್ರಯತ್ನ ನಡೆಸಿರಲಿಲ್ಲ. ಹೀಗಾಗಿ ಎಲೆಮರೆ ಕಾಯಿಯಂತಿದ್ದ ಸಿದ್ದಿ ಜನಾಂಗ ದ ಪ್ರತಿಭಾವಂತ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಕ್ರೀಡಾ ಇಲಾಖೆ ಕ್ರಾಂತಿಕಾರಿ ಹೆಜ್ಜೆ ಇಟ್ಟಿದೆ.
ಇಲಾಖೆಯ ಕ್ರೀಡಾ ವಿಜ್ಞಾನ ಕೇಂದ್ರದ ಮೂಲಕ 24 ಕ್ರೀಡಾ ಪ್ರತಿಭೆಗಳನ್ನು ಗುರುತಿಸಿದ್ದು ಸಚಿವರು ಅವರೊಂದಿಗೆ ಸಂವಾದ ನಡೆಸಿದರು.ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ,ಹಳಿಯಾಳ,ಯಲ್ಲಾಪುರ, ಮುಂಡಗೋಡ್ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದ ಲ್ಲಿರುವ ಸಿದ್ದಿ ಸಮುದಾಯದ ವಿದ್ಯಾರ್ಥಿಗಳನ್ನು ಕ್ರೀಡಾ ವಿಜ್ಞಾನ ಕೇಂದ್ರದ ಟೀಂ ವೈಜ್ಞಾನಿಕವಾಗಿ ಪರೀಕ್ಷೆಗೆ ಒಳಪಡಿಸಿದೆ. ಕ್ರೀಡಾ ಸಾಮರ್ಥ್ಯವಿರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ,ಅವರಲ್ಲಿ ಯಾವ ಕ್ರೀಡೆಯ ಬಲವಿದೆ ಎನ್ನುವುದನ್ನು ವೈಜ್ಞಾನಿಕ ವಾಗಿ ಗುರುತಿಸಿ ಆಯ್ಕೆ ಮಾಡಲಾಗಿದೆ.ಆಯ್ಕೆಯಾದ ವಿದ್ಯಾರ್ಥಿಗಳ ಜೊತೆ ಸಚಿವರು ಚೆರ್ಚೆ ನಡೆಸಿ,ಉನ್ನತ ತರಬೇತಿಗೆ ಚಾಲನೆ ನೀಡಿದರು.
ಈ ಅಭಿಯಾನದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಮಾರು 400 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಿ, 24 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ.ಅವರಲ್ಲಿ ಯಾವ ಬಗೆಯ ಕ್ರೀಡೆಯ ಆಸಕ್ತಿ ಹಾಗೂ ಸಾಮರ್ಥ್ಯವಿದೆ ಎನ್ನುವುದನ್ನು ಗುರುತಿಸಿ,ಅಂತ ರಾಷ್ಟ್ರೀಯ ಮಟ್ಟದ ತರಬೇತಿ ನೀಡಲಾಗುವುದು.

ಸಿದ್ದಿ ಜನಾಂಗದ ವಿದ್ಯಾರ್ಥಿಗಳು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಿದ್ದಾರೆ.ಕ್ರೀಡೆಯಲ್ಲೂ ಹೆಚ್ಚು ಆಸಕ್ತಿ ಇದೆ. ಸೂಕ್ತ ತರಬೇತಿಯ ಅವಶ್ಯಕತೆ ಇದೆ.ಕಬ್ಬಡ್ಡಿ,ಬಾಕ್ಸಿಂಗ್,ರನ್ನಿಂಗ್ ಹಾಗೂ ಬಾಕ್ಸಿಂಗ್‍ನ ಲ್ಲಿ ವಿದ್ಯಾರ್ಥಿಗಳು ಹೆಚ್ಚು ಸಮರ್ಥ ರಿದ್ದಾರೆ.ಹೀಗಾಗಿ ನಾಲ್ಕೂ ಕ್ರೀಡೆಗೆ ಸಂಬಂಧಿಸಿದಂತೆ ಸೂಕ್ತ ತರಬೇತಿ ನೀಡಲು ಸಚಿವರು ಸೂಚನೆ ನೀಡಿದರು.ಜಯನಗರ ಕ್ರೀಡಾ ವಸತಿ ಶಾಲೆ ಸೇರಿದಂತೆ ವಿವಿಧ ಕ್ರೀಡಾ ವಸತಿ ಶಾಲೆಗಳಲ್ಲಿ ವಸತಿ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾಭ್ಯಾಸಕ್ಕೂ ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಸಚಿವರು ಸೂಚಿಸಿದರು.
ಸಚಿವರು ಎಲ್ಲ ವಿದ್ಯಾರ್ಥಿಗಳ ಜೊತೆ ನೇರವಾಗಿ ಮಾತುಕತೆ ನಡೆಸಿದರು.ಕೆಲವು ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತುಂಬ ಆಸಕ್ತಿ ಇದೆ.ಉತ್ತಮ ಅವಕಾಶ ನೀಡಿದ್ದಾರೆ.ಹೆಚ್ಚಿನ ತರಬೇತಿ ಪಡೆದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಂಗಾರದ ಪದಕೆ ಗೆದ್ದು ದೇಶದ ಕೀರ್ತಿ ಹೆಚ್ಚಿಸುವುದಾಗಿ ವಿಶ್ವಾಸದ ಮಾತನಾಡಿದರು. ಕ್ರೀಡಾ ಇಲಾಖೆ ಎಲ್ಲ ರೀತಿಯ ನೆರವು ನೀಡುತ್ತದೆ.ಏಕಾಗ್ರತೆಯಿಂದ ಅಭ್ಯಾಸ ಮಾಡಬೇಕು. ಉತ್ತಮ ತರಬೇತುದಾರರು, ಗುಣಮಟ್ಟದ ಕ್ರೀಡಾ ಸೌಕರ್ಯ ಎಲ್ಲವನ್ನೂ ನೀಡುತ್ತೇವೆ ಎಂದು ಸಚಿವರು ಭರವಸೆ ನೀಡಿದರು.




