ದಸರಾ… ಸದ್ಯ ಸಿನಿ ಪ್ರಿಯರಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿಸಿರೋ ಸಿನಿಮಾ. ನ್ಯಾಚುರಲ್ ಸ್ಟಾರ್ ನಾನಿ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ದಸರಾ ಪ್ರೇಕ್ಷಕರನ್ನು ರಂಜಿಸಲು ಸಿಕ್ಕಾಪಟ್ಟೆ ತಯಾರಿ ನಡೆಸುತ್ತಿದೆ.
ನಾನಿ ಮತ್ತು ಕೀರ್ತಿ ಸುರೇಶ್ ಜೋಡಿಯ ಮೆಗಾ ಪ್ರಾಜೆಕ್ಟ್ ‘ದಸರಾ’ ಸಿನಿಮಾ ಹೇಗೆ ಮೂಡಿ ಬರಬಹುದು ಅನ್ನೋ ಅಂತೆ ಕಂತೆ ಸುದ್ದಿ ನಡುವೆ ನಟಿ ಕೀರ್ತಿ ಸುರೇಶ್ ಹುಟ್ಟು ಹಬ್ಬದ ಹಿನ್ನಲೆ ಸಣ್ಣದೊಂದು ಕ್ಲೂ ಬಿಟ್ಟುಕೊಟ್ಟಿದೆ.

ಹೌದು, ಸಿನಿ ರಸಿಕರ ಕುತೂಹಲವನ್ನು ಹಾಗೆ ಕಾಪಾಡಿಕೊಂಡು ಬಂದಿದ್ದ ಚಿತ್ರತಂಡ ಕೀರ್ತಿ ಸುರೇಶ್ ಹುಟ್ಟುಹಬ್ಬದ ಪ್ರಯುಕ್ತ ಫಸ್ಟ್ ಲುಕ್ ರಿವೀಲ್ ಮಾಡಿದೆ. ನಾನಿ ಹೊಸ ಅವತಾರ ಖಡಕ್ ಲುಕ್ ಕಂಡು ಫಿದಾ ಆಗಿದ್ದ ಸಿನಿರಸಿಕರಿಗೆ, ಕೀರ್ತಿ ಸುರೇಶ್ ಲುಕ್ ಕೂಡ ಅಷ್ಟೇ ಮನಸೆಳೆದಿದೆ. ಚಿತ್ರದಲ್ಲಿ ವೆನ್ನಲ ಪಾತ್ರವನ್ನು ಕೀರ್ತಿ ನಿಭಾಯಿಸುತ್ತಿದ್ದು, ಹಳ್ಳಿ ಹುಡುಗಿಯಾಗಿ ಹಳದಿ ಸೀರೆಯಲ್ಲಿ ಮಿಂಚುತ್ತಿರುವ ಕೀರ್ತಿ ಅವತಾರಕ್ಕೆ ಎಲ್ಲರೂ ಕ್ಲೀನ್ ಬೋಲ್ಡ್ ಆಗಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ನಾನಿ ಫಸ್ಟ್ ಲುಕ್, ಧೂಮ್ ದಾಮ್ ದೊಸ್ತಾನ ಹಾಡು ಸಿನಿ ಪ್ರಿಯರಿಂದ ಅದ್ಭುತ ರೆಸ್ಪಾನ್ ಪಡೆದುಕೊಂಡಿದೆ. ಇದೀಗ ಕೀರ್ತಿ ಸುರೇಶ್ ಲುಕ್ ಕೂಡ ಎಲ್ಲರ ಗಮನ ಸೆಳೆದಿದೆ. ಇವೆಲ್ಲವೂ ಸಿನಿಮಾ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಶ್ರೀಕಾಂತ್ ಒಡೆಲಾ ನಿರ್ದೇಶಿಸುತ್ತಿರುವ ಈ ಚಿತ್ರ ಮಾಸ್ ಅಂಡ್ ಆಕ್ಷನ್ ಕಥಾಹಂದರ ಒಳಗೊಂಡಿದೆ. ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಸಮುದ್ರಕನಿ, ಸಾಯಿಕುಮಾರ್, ಜರೀನಾ ವಹಾಬ್ ಸೇರಿದಂತೆ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ. 2023 ಮಾರ್ಚ್ 30ರಂದು ಸಿನಿಮಾ ಬಿಡುಗಡೆಯಾಗಲಿದೆ.

ಶ್ರೀಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ ಬ್ಯಾನರ್ ನಡಿ ಸುಧಾಕರ್ ಚೆರುಕುರಿ, ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಸಂತೋಷ್ ನಾರಾಯಣನ್ ಮ್ಯೂಸಿಕ್, ಸತ್ಯನ್ ಸೂರ್ಯನ್ ಕ್ಯಾಮೆರಾ ವರ್ಕ್, ನವೀನ್ ನೂಲಿ ಸಂಕಲನ, ಅನ್ಬರಿವ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.
#NATURAL STAR NANI #KEERTHY SURESH #PAN INDIA CINEMA #FIRST LOOK OF DASARA FILM #SRIKANTH ODELA #DIRECTOR