ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಸತತವಾಗಿ ಹೋರಾಟ ನಡೆಸುತ್ತಾ ಬಂದಿರುವ ಪಂಚಮಸಾಲಿ ಪೀಠದ ಜಗದ್ಗುರು ಜಯಮೃತ್ಯುಂಜಯ ಸ್ವಾಮೀಜಿ ಅವರ “ಸಿಡಿ” ಇದೆ ಎಂಬ ವದಂತಿಗೆ ಸ್ವತಃ ಸ್ವಾಮೀಜಿಯವರೆ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಬೆಳಗಾವಿಯಲ್ಲಿ ಸ್ವಾಮೀಜಿ ಸಿಡಿ ಇದೆ ಎಂದು ವದಂತಿ ಹಬ್ಬಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿಗೆ ಮಾಧ್ಯಮಗಳು ಪ್ರಶ್ನೆ ಕೇಳುತ್ತಿದಂತೆ “ನೋ ಕಮೆಂಟ್” ನಾನು ಅದರ ಬಗ್ಗೆ ಏನೂ ಮಾತನಾಡಲ್ಲ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಅರುಣ್ ಸಿಂಗ್ ಹುಬ್ಬಳ್ಳಿ ಚಿಕ್ಕೋಡಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಬಗ್ಗೆ ನಾಯಕರಲ್ಲ ಅಂತಾ ಹೇಳಿಕೆ ನೀಡಿದ್ದಾರೆ. ಇದು ಇಡೀ ಕರ್ನಾಟಕದ ಪಂಚಮಸಾಲಿ ಸಮುದಾಯದ ಜನರ ಆಕ್ರೋಶಕ್ಕೆ ಕಾರಣವಾಗಿದೆ,
ಇವತ್ತಲ್ಲ ನಾಳೆ ಯತ್ನಾಳ್ ಈ ರಾಜ್ಯದ ಸಿಎಂ ಆಗುವ ಸಾಧ್ಯತೆ ಇದೆ, ಹೀಗಾಗಿ ಈಗಲೇ ಅವರನ್ನು ಡ್ಯಾಮೇಜ್ ಮಾಡಿಬಿಟ್ರೆ ಸರಿಯಾಗುತ್ತೆ ಅಂತಾ ಅರುಣ್ ಸಿಂಗ್‌ಗೆ ತಪ್ಪು ಮಾಹಿತಿ ನೀಡುವ ಕೆಲಸ ಆಗಿದೆ ಎಂದು ಅಸಮಾಧಾನ ಹೊರ ಹಾಕಿದರು.