PARESH MESTA MURDER CASE: ನನಗೆ ನ್ಯಾಯ ವಂಚನೆಯಾಗಿದೆ: ಪರೇಶ್ ಮೆಸ್ತಾ ಪ್ರಕರಣವನ್ನು ಸಿಬಿಐಯಿಂದ ಪುನರ್ ತನಿಖೆ ನಡೆಸಿ: ತಂದೆ ಕಮಾಲಾಕರ್ ಮೆಸ್ತಾನಿಂದ ಮನವಿ

ಬೆಂಗಳೂರು : ನನಗೆ ನ್ಯಾಯ ವಂಚನೆ ಆಗಿದೆ, ಪರೇಶ್ ಮೆಸ್ತಾ ಸಾವಿನ ಪ್ರಕರಣ ಸಿಬಿಐಯಿಂದ ಪುನರ್ ತನಿಖೆಗೆ ಆದೇಶಿಸಿ ಎಂದು ಪರೇಶ್ ಮೆಸ್ತಾನ ತಂದೆ ಕಮಾಲಾಕರ್ ಮೆಸ್ತಾ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಮನವಿ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಕುಮಟಾ ಭಾಗದಲ್ಲಿ ನಡೆದಿರುವ ಪರೇಶ್ ಮೆಸ್ತಾ ಸಾವಿನ ಪ್ರಕರಣ ಇದೀಗ ವಿಧಾನಸೌಧದ ಮೆಟ್ಟಿಲೇರಿದ್ದು, ಪರೇಶ್ ಮೆಸ್ತಾನ ತಂದೆ ಕಮಾಲಾಕರ್ ಮೆಸ್ತಾ ಅವರು, ನನ್ನ ಮಗ ಪರೇಶ್ ಮೆಸ್ತಾನ ಸಾವು ಅಸಹಜ ಸಾವಾಗಿದ್ದು, ಸಿಬಿಐ ಸಾಕ್ಷಾಧಾರಗಳು ಲಭ್ಯ ಆಗಿಲ್ಲ ಎಂಬ ಕಾರಣಕ್ಕೆ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ಇದರಿಂದ ನನಗೆ ನ್ಯಾಯ ವಂಚನೆ ಆಗಿದೆ.
ನನ್ನ ಮಗ ಪರೇಶ್ ಮೆಸ್ತಾನ ಪ್ರಕರಣವನ್ನು ಸಿಬಿಐಗೆ ನೀಡುವಾಗ 4 ತಿಂಗಳ ಅವಧಿ ಮೀರಿದ್ದು, ಬಹುತೇಕ ಸಾಕ್ಷಾಧಾರಗಳು ನಾಶ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಮತ್ತಷ್ಟು ಆಳವಾದ ತನಿಖೆ ಮಾಡಬೇಕಾದ ಅವಶ್ಯಕತೆ ಇರುವುದರಿಂದ ಪುನರ್ ಸಿಬಿಐ ತನಿಖೆಗೆ ಆದೇಶ ನೀಡಬೇಕೆಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದಾರೆ.

ಕಮಾಲಕರ್ ಮೆಸ್ತಾ ಅವರ ಮನವಿಯನ್ನು ಆಲಿಸಿದ ಮುಖ್ಯಮಂತ್ರಿ ಬೊಮ್ಮಾಯಿರವರು ತಂದೆಯಾಗಿ ನಿಮ್ಮ ಕಷ್ಟ ಸರ್ಕಾರ ಅರ್ಥಮಾಡಿಕೊಳ್ಳುತ್ತದೆ. ಮನವಿಯನ್ನು ಪರಿಶೀಲಿಸಿ, ಪುನರ್ ತನಿಖೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ವೇಳೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್, ಮೀನುಗಾರಿಗಾ ಸಚಿವ ಎಸ್.ಅಂಗಾರ ಅವರು ಜೊತೆಯಲ್ಲಿ ಇದ್ದರು.

#PARESH MESTA #KAMALAKAR MESTA #FATHER #DEMANDED #CM BASAVARAJ BOMMAI #REINVESTIGATE FROM CBI #CBI INQUAIRY #SHIVARAM HEBBAR #KOTA SRINIVASA POOJARY #S ANGARA

More News