ಬೆಂಗಳೂರು : ರಾಜ್ಯದಲ್ಲಿನ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಪೋಷಕರಿಂದ ಪ್ರತಿ ತಿಂಗಳು 100 ರೂಪಾಯಿ ಪ್ರತಿ ವಿದ್ಯಾರ್ಥಿಗೆ ಸಂಗ್ರಹಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಸಂಬಂಧ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶಕ್ಕೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ಕಮಿಷನ್ ಆಸೆಗಾಗಿ ಖಜಾನೆ ಲೂಟಿಯಾಗಿದೆ. ಇದೀಗ ಬಡ ಮಕ್ಕಳ ಪೋಷಕರ ಜೇಬಿಗೆ ಕತ್ತರಿ ಹಾಕಲು ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೇವ್ ಸ್ಟೂಡೆಂಟ್ಸ್ ಎಂಬ ಹ್ಯಾಷ್ ಟ್ಯಾಗ್ ಬಳಸಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಸರ್ಕಾರಿ ಶಾಲೆಯ ಬಡಮಕ್ಕಳ ಮೇಲೆ @BJP4KARNATAKA ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ. ಕಮಿಷನ್ ಹೆಸರಿನಲ್ಲಿ ರಾಜ್ಯದ ಖಜಾನೆ ಲೂಟಿ ಆಯಿತು. ಈಗ ಬಡ ಮಕ್ಕಳ ಪೋಷಕರ ಬೇಬಿಗೂ ಕತ್ತರಿ. ಬಿಜೆಪಿ ಸರ್ಕಾರಕ್ಕೆ ಇಂಥಾ ದೈನೇಸಿ ಸ್ಥಿತಿ ಬರಬಾರದಿತ್ತು.
ವಿದ್ಯಾರ್ಥಿಗಳಿಗೆ ಹಾಲು, ಬಿಸಿ ಊಟ, ಸಮವಸ್ತ್ರ ಶೂ, ವಿದ್ಯಾಸಿರಿ, ಹಾಸ್ಟೆಲ್ ಸೌಲಭ್ಯಗಳನ್ನು ನೀಡಿದ್ದು ನಾವು. ಅವರಿಂದ ಒಂದೊಂದನ್ನೇ ಕಿತ್ತುಕೊಳ್ಳುತ್ತಿರುವ @BJP4KARNATAKA ಸರ್ಕಾರ ಈಗ ಅವರಿಂದ ದುಡ್ಡುಕಿತ್ತುಕೊಳ್ಳಲು ಹೊರಟಿದೆ.

ವೇದಿಕೆ ಮೇಲೆ ನಿಂತು ಧಮ್, ತಾಕತ್ ಎಂದು ಬೊಬ್ಬಿರಿಯುವವರು ವಿದ್ಯಾರ್ಥಿಗಳ ನೆರವಿನ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿ ತಮ್ಮ ತಾಕತ್ ತೋರಿಸಲಿ. @CMOFKARNATAKA #SAVESTUDENTS

ನಮ್ಮ ಸರ್ಕಾರ ವಿದ್ಯಾಸಿರಿ, ಅರಿವು, ಶೂಭಾಗ್ಯ ವಿದೇಶಿ ವ್ಯಾಸಂಗಕ್ಕೆ ಆರ್ಥಿಕ ನೆರವು, ಶೈಕ್ಷಣಿಕ ಸಾಲ ಯೋಜನೆ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕು ನೀಡಿದರೆ, ಈಗಿನ @BJP4KARNATAKA ಸರ್ಕಾರ ಓದುವ ಮಕ್ಕಳಿಗದೆ ತ್ರಿಶೂಲ ದೀಕ್ಷೆ ನೀಡಿ ಅವರ ಬದುಕನ್ನು ಕತ್ತಲಿಗೆ ದೂಡುತ್ತಿದೆ.

ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಪೋಷಕರಿಂದ ಹಣ ಸಂಗ್ರಹಿಸುವಂತೆ ಹೊರಡಿಸಿರುವ ಆದೇಶವನ್ನು ಈ ಕೂಡಲೇ ಹಿಂಪಡೆಯಬೇಕು ಮತ್ತು ಅನುದಾನ ಕೊರತೆಯಿಂದ ಸ್ಥಗಿತಗೊಂಡಿರುವ ಎಲ್ಲಾ ಶೈಕ್ಷಣಿಕ ಯೋಜನೆಗಳಿಗೆ ಪುನರ್ ಚಾಲನೆ ನೀಡಬೇಕು ಎಂದು ರಾಜ್ಯ @BJP4KARNATAKA ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

#government school #parents pay 100 rupees #school development #siddaramaiah #criticized