ಬೆಂಗಳೂರು: ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ನೆಲಗದರನಹಳ್ಳಿಯಲ್ಲಿರುವ ನಿಸರ್ಗ ವಿದ್ಯಾವಾಹಿನಿ ಶಾಲೆಯಲ್ಲಿ ಆಯೋಜಿಸಿದ್ದ “ಕೋಟಿ ಕಂಠ ಗಾಯನ” ಅಭಿಯಾನವನ್ನು ಮಾಜಿ ಶಾಸಕ .ಎಸ್.ಮುನಿರಾಜು ರವರು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಕನ್ನಡದ ಹಿರಿಯ ಸಾಹಿತಿಗಳು ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಅವರ ಸೇವೆಗಳನ್ನ ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ನಾಗರೀಕ ಬಂಧುಗಳು ಕನ್ನಡ ಧ್ವಜವನ್ನು ಹಿಡಿದು ಕನ್ನಡದ ಆಯ್ದ ಗೀತೆಗಳನ್ನು ಹಾಡುವ ಮೂಲಕ ಕೋಟಿ ಕಂಠ ಗಾಯನಕ್ಕೆ ಧ್ವನಿಯಾದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಎನ್.ಲೋಕೇಶ್, ಶ್ರೀಮತಿ ಸುಜಾತ ಮುನಿರಾಜು, ನಿಸರ್ಗ ವಿದ್ಯಾವಾಹಿನಿ ಶಾಲೆಯ ಮುಖ್ಯಸ್ಥರಾದ ಕೆಂಪರಾಜು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪಿ.ಹೆಚ್.ರಾಜು, ವಿನೋದ್ ಗೌಡ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.




