ಗಾಂಧಿನಗರ : ಗುಜರಾತ್‌ನ ಮೊರ್ಬಿಯ ಮಚ್ಚು ನದಿ ಮೇಲೆ ನಿರ್ಮಿಸಲಾಗಿದ್ದ ಕೇಬಲ್ ಸೇತುವೆ ಮುರಿದು ಬಿದ್ದಿದ್ದು ಹಲವರು ನೂರಾರು ಮಂದಿ ನದಿಗೆ ಬಿದ್ದಿದ್ದಾರೆ.

ಇನ್ನು 10 ಮಂದಿ ಸಾವನ್ನಪ್ಪಿದ್ದು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ನೂರಾರು ಜನರು ಸೇತುವೆ ಮೇಲೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ರಕ್ಷಣಾ ಸಿಬ್ಬಂದಿ ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಮೋರ್ಬಿಯಲ್ಲಿ ಸಂಭವಿಸಿದ ದುರ್ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಮತ್ತು ಇತರ ಅಧಿಕಾರಿಗಳೊಂದಿಗೆ ಮಾತನಾಡಿದರು.

ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳ ತುರ್ತು ಸಜ್ಜುಗೊಳಿಸುವಂತೆ ಅವರು ಕೋರಿದ್ದಾರೆ. ಪರಿಸ್ಥಿತಿಯನ್ನು ನಿಕಟವಾಗಿ ಮತ್ತು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಮತ್ತು ಪೀಡಿತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಅವರು ಕೇಳಿಕೊಂಡಿದ್ದಾರೆ.




