SOLAR SCAM: ಡಿಕೆ ಶಿವಕುಮಾರ್ ಅಧಿಕಾರವಧಿಯಲ್ಲಿ ನಡೆದಿದೆಯೆನ್ನಲಾದ ಸೋಲಾರ್ ಹಗರಣದ ತನಿಖೆ ಕುರಿತು ಕಾದು ನೋಡಿ ಎಂದು ಹೇಳಿದ ಮುಖ್ಯಮಂತ್ರಿ

ಬೆಂಗಳೂರು : ಈ ಹಿಂದಿನ ಸರ್ಕಾರದಲ್ಲಿ ನಡೆದಿದೆ ಎನ್ನಲಾದ ಸೋಲಾರ್ ಹಗರಣ ತನಿಖೆಯಾಗುವುದೇ ಎಂಬುದರ ಬಗ್ಗೆ ಕಾದು ನೋಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಮ್ ಇದ್ದರೆ ಸೋಲಾರ್ ಹಗರಣವನ್ನು ತನಿಖೆಗೆ ಒಪ್ಪಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿಕೆಗೆ ಮುಖ್ಯಮಂತ್ರಿ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು.
ವ್ಯಾಖ್ಯಾನ ಮಾಡುವುದಿಲ್ಲ
ಸಿದ್ದರಾಮಯ್ಯ ಅವರು ಸಾಲ ಪಡೆದಿರುವ ಬಗ್ಗೆ ಪತ್ರಿಕೆಯಲ್ಲಿ ಸುದ್ದಿ ನೋಡಿದ್ದೇನೆ. ಯಾವುದೇ ಆದರೂ ವ್ಯವಸ್ಥಿತವಾಗಿ ತನಿಖೆಯಾಗಬೇಕು. ದೂರು ಕೊಟ್ಟರೆ ಆ ಪ್ರಕ್ರಿಯೆಯಿಂದಲೇ ತನಿಖೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ಈ ಸಂದರ್ಭದಲ್ಲಿ ನಾನು ವಿರೋಧ ಪಕ್ಷದ ರೀತಿಯಲ್ಲಿ ಯಾವುದೇ ವ್ಯಾಖ್ಯಾನ ಮಾಡುವುದಿಲ್ಲ ಎಂದು ಟಿಕೀಸಿದರು.
67 ನೇ ಕನ್ನಡ ರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸುವ ಸಂಕಲ್ಪ
67 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸುವ ಸಂಕಲ್ಪವನ್ನು ರಾಜ್ಯ ಸರ್ಕಾರ ಮಾಡಿದೆ ಎಂದು ತಿಳಿಸಿದರು.
ನಾಳೆ ನಾಡಿನಾದ್ಯಂತ ಗ್ರಾಮಗಳಲ್ಲಿ, ನಗರಗಳಲ್ಲಿ, ಶಾಲೆ ಹಾಗೂ ಇತರೆ ಸಂಘ ಸಂಸ್ಥೆಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ರಾಜ್ಯೋತ್ಸವದ ಆಚರಿಸಬೇಕು ಹಾಗೂ ಕನ್ನಡದ ಧ್ವಜಗಳನ್ನು ಹಾರಿಸಬೇಕು ಎಂದು ಕರೆ ನೀಡಿದರು.
ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ
ನಾಳೆ ಸಂಜೆ 4.00 ಗಂಟೆಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಹಮ್ಮಿಕೊಳ್ಳಲಾಗಿದೆ. ದಿವಂಗತ ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ಸರ್ಕಾರ ಕೊಡಮಾಡುತ್ತಿದ್ದು, ಅಭಿಮಾನಿ ಕನ್ನಡಿಗರು ಭಾಗವಹಿಸಬೇಕೆಂದು ಮುಖ್ಯಮಂತ್ರಿಗಳು ಕೋರಿದರು.
ರಾಜ್ಯೋತ್ಸವ ಪ್ರಶಸ್ತಿ
ನಾಳೆ ಸಂಜೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗಳ ವಿತರಣೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಗಲಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಎಲ್ಲಾ ಶ್ರೇಷ್ಠ ವ್ಯಕ್ತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು . ಕಾರ್ಯಕ್ರಮ ದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕೆಂದು ಮುಖ್ಯಮಂತ್ರಿಗಳು ತಿಳಿಸಿದರು.
ಬಂಡವಾಳ ಹೂಡಿಕೆದಾರರ ಸಮಾವೇಶ
ನವೆಂಬರ್ 2, 3 4 ರಂದು ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಜಗತ್ತಿನಾದ್ಯಂತ ಪ್ರಮುಖ ಉದ್ಯಮಿಗಳು, ಉದ್ದಿಮೆಯ ನಾಯಕರು ಈ ಸಮಾವೇಶದಲ್ಲಿ ಭಾಗವಹಿಸಿದ್ದು, ಜೊತೆಗೆ 5 ಲಕ್ಷ ಕೋಟಿ ರೂ.ಗಳಿಗೂ ಹೆಚ್ವಿನ ಬಂಡವಾಳ ಹೂಡಿಕೆಯಾಗುತ್ತದೆ ಎಂದರು.
ನವೆಂಬರ್ 11 ರಂದು ಪ್ರಧಾನಿಗಳಿಂದ ಪ್ರಗತಿ ಪ್ರತಿಮೆ ಉದ್ಘಾಟನೆ
ನವೆಂಬರ್ 11ರಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್, ಬೆಂಗಳೂರು ರೈಲ್ವೇ ನಿಲ್ದಾಣದಲ್ಲಿ ವಂದೇ ಭಾರತ್ – ಚೆನ್ನೈ, ಬೆಂಗಳೂರು- ಮೈಸೂರಿಗೆ , ಹೈಸ್ಪೀಡ್ ರೈಲನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಕೂಡ ಪ್ರಧಾನಿಗಳೇ ಉದ್ಘಾಟಿಸುತ್ತಿದ್ದು, ಬೆಂಗಳೂರು ನಿರ್ಮಾತೃ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಯ ಪ್ರತಿಮೆ ಉದ್ಘಾಟನೆಯಾಗುತ್ತಿದೆ. ಕೆಂಪೇಗೌಡರು ಪ್ರಗತಿಯ ಸಂಕೇತವಾಗಿದ್ದು, ಪ್ರಗತಿಯ ಪ್ರತಿಮೆ ಎಂದು ಹೆಸರಿಡಲಾಗಿದೆ. ಲಕ್ಷಾಂತರ ಜನ ಇದರಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾರೆ ಎಂದು ವಿವರಿಸಿದರು. .

More News