FORMER MINISTER RAMESH JARAKIHOLI: ಚುನಾವಣಾ ಆಯೋಗಕ್ಕೆ ಸುಳ್ಳು ಪ್ರಮಾಮಪತ್ರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು

ಬೆಂಗಳೂರು : ಕಳೆದ ಚುನಾವಣೆಯಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಅವರು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಅವರು ರಾಜ್ಯ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ತಮ್ಮ ಇಬ್ಬರು ಮಕ್ಕಳು ಸೇರಿ ಮೂವರ ಹೆಸರಿನಲ್ಲಿ ಸೌಭಾಗ್ಯ ಶುಗರ್ ಕಂಪನಿ ಮೂಲಕ ಸುಮಾರು ಒಂಭತ್ತು ಬ್ಯಾಂಕಗಳಲ್ಲಿ 578 ಕೋಟಿ ಸಾಲ ಪಡೆದಿದ್ದಾರೆ. ಸೌಭಾಗ್ಯ ಶುಗರ್ಸ್ ದಿವಾಳಿ ಎಂದು ಘೋಷಣೆ ಮಾಡಿದ್ದರೂ ಕೂಡ ಬೇನಾಮಿ ಹೆಸರಿನಲ್ಲಿ ನಡೆಯುತ್ತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಹಾಗೆಯೇ ಇದೇ ಸಂದರ್ಭದಲ್ಲಿ ರಮೇಶ್ ಬಾಬು ಅವರು ಮಾತನಾಡಿ, ಚುನಾವಣಾ ಸಂದರ್ಭದಲ್ಲಿ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಸೌಭಾಗ್ಯ ಶುಗರ್ಸ್ ಕಂಪನಿಗೆ ಸಂಬಂಧಿಸಿದ ದಾಖಲಾತಿಗಳನ್ನು ಕೊಟ್ಟಿಲ್ಲ ದೂರಿದ್ದಾರೆ.

#ramesh jarkiholi #former minister #kpcc rameshbabu #kpcc laxman #state election commission #complaint #sowbhagyalaxmi sugars #bank loan #hidding the informetion

More News