ಪ್ರಧಾನಿ ಮೋದಿಗೆ ಮೈಸೂರು ರಾಜರು ಧರಿಸುತ್ತಿದ್ದ ಮಾದರಿ ಪೇಟೆ ತೊಡಿಸಲು ಸರ್ಕಾರ ಸಿದ್ಧತೆ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರ ಪ್ರತಿಮೆಯನ್ನು ನವೆಂಬರ್ 11ಕ್ಕೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರಧಾನಿ ಮೋದಿ ಅವರಿಗೆ ಮೈಸೂರು ಮಹಾರಾಜ ಧರಿಸುತ್ತಿದ್ದ ಮಾದರಿಯ ಪೇಟವನ್ನು ನೀಡಲು ಸರ್ಕಾರ ಮುಂದಾಗಿದೆ. ಹೀಗಾಗಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ್ ನೇತೃತ್ವದಲ್ಲಿ ಉನ್ನತ ಶ್ರೇಣಿಯ ಪೇಟವನ್ನು ಸಿದ್ಧಪಡಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಹಸ್ತಾಂತರಿಸಲಾಯ್ತು.

ಈ ಪೇಟವನ್ನು ನವೆಂಬರ್ 11ರಂದು ನಡೆಯುವ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತೊಡಿಸಿ ಗೌರವಿಸಲಾಗುವುದು.

More News