ಇರಾನ್ ನಲ್ಲಿ ಆರಂಭವಾಗಿದ್ದ ಹಿಜಾಬ್ ವಿರುದ್ಧದ ಪ್ರತಿಭಟನೆ ಈಗ ಭಾರದ ಕೇರಳಕ್ಕೂ ವ್ಯಾಪಿಸಿಕೊಂಡಿದೆ. ಹಿಜಾಬ್‌ಗೆ ಸಂಬಂಧಿಸಿದಂತೆ ಇರಾನ್‌ನಲ್ಲಿ ಕೆಲ ದಿನಗಳಿಂದ ಸರ್ಕಾರದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಅನೇಕ ಜನರು ಸೈನಿಕರ ಗುಂಡೇಟಿಗೆ ಬಲಿಯಾಗಿದ್ದು ಉಂಟು, ಹಿಜಾಬ್ ವಿರುದ್ಧ ಆರಂಭವಾದ ಈ ಪ್ರತಿಭಟನೆಯ ಜ್ವಾಲೆ ಇದೀಗ ಭಾರತದ ಕೇರಳಕ್ಕೂ ಕಾಲಿಟ್ಟಿದೆ.

ಹೌದು ಕೇರಳದ ಕೋಝಿಕ್ಕೋಡ್ ನಲ್ಲಿ ನೂರಾರು ಮಹಿಳೆಯರು ಹಿಜಾಬ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ರು. ಈ ಸಮಯದಲ್ಲಿ, ಜನರು ಇರಾನ್‌ನಲ್ಲಿ ಹಿಜಾಬ್ ವಿರೋಧಿ ಚಳುವಳಿಗೆ ಒಗ್ಗಟ್ಟಿನ ಸಂದೇಶವನ್ನು ನೀಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.




