ನವದೆಹಲಿ: ಭಾರತೀಯ ಜನತಾ ಪಾರ್ಟಿಯ ಭೀಷ್ಮ’ ಎಂದೇ ಖ್ಯಾತಯಾಗಿರುವ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರು ಇಂದು 95ನೇ ವಸಂತಕ್ಕೆ ಕಾಲಿರಿಸಿದ್ದಾರೆ.

ಅಡ್ವಾಣಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಡ್ವಾಣಿ ಅವರ ಮನೆಗೆ ತೆರಳಿ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.

90ರ ದಶಕದಲ್ಲಿ ದೇಶದಲ್ಲಿ ನಡೆದ ಅಯೋಧ್ಯೆ ರಾಮ ಜನ್ಮ ಭೂಮಿ ಚಳುವಳಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಬಿಜೆಪಿ ಭೀಷ್ಮ ಅಡ್ವಾಣಿ, ರಥಯಾತ್ರೆ ಮೂಲಕ ದೇಶಾದ್ಯಂತ ಪಕ್ಷ ಸಂಘಟನೆಗೆ ಕೊಡಗೆ ನೀಡಿದ್ದಾರೆ.. ಮಾಜಿ ಪ್ರಧಾನಮಂತ್ರಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ ಡಿಎ ಸರ್ಕಾರದಲ್ಲಿ ಉಪ ಪ್ರಧಾನಮಂತ್ರಿ ಹಾಗೂ ಗೃಹ ಸಚಿವರಾಗಿ ಎಲ್.ಕೆ.ಅಡ್ವಾಣಿ ಸೇವೆ ಸಲ್ಲಿಸಿದ್ದಾರೆ..