ಸದಾ ಜನಪರ ಕೆಲಸಗಳ ಮೂಲಕ ಸದ್ದು ಮಾಡುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಾಯಕತ್ವದ ಆಮ್ ಆದ್ಮಿ ಪಾರ್ಟಿ, ದೆಹಲಿಯಿಂದ ಪಂಜಾಬ್ ವರೆಗೂ ತನ್ನ ವ್ಯಾಪ್ತಿಯನ್ನ ವಿಸ್ತರಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಗುಜರಾತ್ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಪೊರಕೆಯಿಂದ ಭ್ರಷ್ಟಾಚಾರವನ್ನು ಗುಡಿಸಿ ಹಾಕಲು ಮುಂದಾಗಿದೆ. ಇನ್ನು ರಾಜ್ಯದಲ್ಲಿ ಕೂಡ ಎಎಪಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ, ಎಎಪಿಯ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಪೊಲೀಸ್ ಕಮಿಷನ್ ಭಾಸ್ಕರ್ ರಾವ್ ಅವರ ನಾಯಕತ್ವದಲ್ಲಿ ಬಿಜೆಪಿ ಸರ್ಕಾರದ ಜನ ವಿರೋಧಿ ಧೋರಣೆಗಳನ್ನ ಖಂಡಿಸಿ, ಬೀದಿಗಿಳಿದು ಸಾವಿರಾರು ಆಮ್ ಆದ್ಮಿ ಪಾರ್ಟಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.

ಬೆಂಗಳೂರು ನಗರದಲ್ಲಿ ಎಎಪಿ ಸಖತ್ ಆಕ್ಟಿವ್ ಆಗಿ ಕೆಲಸ ಮಾಡುತ್ತಿದೆ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲೂ ಕೂಡ ಹಿರಿಯ ಮುಖಂಡ ಸೌಂದರ್ಯ ಮಂಜಪ್ಪ ಅವರ ಮಾರ್ಗದರ್ಶನದಲ್ಲಿ ಕ್ಷೇತ್ರದ ಅಧ್ಯಕ್ಷ ಕೀರ್ತನ್ ಕುಮಾರ್ ಅವರು ಕೂಡ ಪಕ್ಷ ಸಂಘಟನೆ ಮತ್ತು ಸರ್ಕಾರದ ನ್ಯೂನತೆಗಳ ವಿರುದ್ಧ ಹೋರಾಟ ನಡೆಸುವುದರ ಜೊತೆಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಗ್ಗನಹಳ್ಳಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಮೈದಾನದಲ್ಲಿ ಕಸವನ್ನು ಡಂಪ್ ಮಾಡುವುದನ್ನ ಖಂಡಿಸಿದ್ಧಾರೆ.

ಇದರಿಂದ ಅಕ್ಕ-ಪಕ್ಕದ ನಿವಾಸಿಗಳಿಗೆ ಸಾಂಕ್ರಾಮಿಕ ರೋಗ ಹರಡುತ್ತಿವೆ. ಹೀಗಾಗಿ ಇಲ್ಲಿರುವ ಕಸ ಮತ್ತು ಕಸದ ವಾಹನಗಳನ್ನು ತೆರವುಗೊಳಿಸಲು ಆಮ್ ಆದ್ಮಿ ಪಕ್ಷದ ವತಿಯಿಂದ ಬಾಗಲಕುಂಟೆಯ ಜಂಟಿ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದಾಸರಹಳ್ಳಿಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಕೀರ್ತನ್ ಕುಮಾರ್, ಎಸ್.ಸಿ/ಎಸ್.ಟಿ ಘಟಕದ ಅಧ್ಯಕ್ಷರಾದ ಡಾ.ಜನ್ಮಭೂಮಿ ನಾಗರಾಜ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶ್ರೀ ಅಜೀಂ, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾದ ಶ್ರೀ ಹೇಮಂತ ಕುಮಾರ ಹಾಗೂ ಪಕ್ಷದ ನಾಯಕರು, ಕಾರ್ಯಕರ್ತರು ಉಪಸ್ಥಿತಿಯಿದ್ದರು..




