SUKESH CHANDRASHEKAR ALLIGATION: ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ಸಿಬಿಐ ತನಿಖೆಗೆ ಆಗ್ರಹ: ಆರೋಪಿ ಸುಕೇಶ್ ಚಂದ್ರಶೇಖರ್ ಪತ್ರ

ನವದೆಹಲಿ : ಬಹುಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಸುಕೇಶ್ ಚಂದ್ರಶೇಖರ್ ಅವರು ಆಮ್ ಆದ್ಮಿ ಪಾರ್ಟಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಸಿಬಿಐ ತನಿಖೆ ನಡೆಸುವಂತೆ ಕೋರಿ ಲೆಫ್ಟಿನೆಂಟ್ ಗರ್ವನರ್ ಅವರಿಗೆ ಪತ್ರ ಬರೆದಿದ್ದಾರೆ.
ಈ ಸಂಬಂಧ ಸುಕೇಶ್ ಅವರ ವಕೀಲರು ಮಾಹಿತಿ ನೀಡಿದ್ದು, ವಂಚನೆ ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕೆಂದು ಸುಕೇಶ್ ಒತ್ತಾಯಿಸಿದ್ದಾರೆ ಎಂದು ತಿಳಿಸಿದ್ದಾರೆ.

ಜೈಲಿನಲ್ಲಿರುವ ಆರೋಪಿ ಸುಕೇಶ್ ಅವರಿಗೆ ಜೈಲಿನಲ್ಲಿ ಭದ್ರತೆ ಮತ್ತು ಇನ್ನಿತರ ಸೌಲಭ್ಯಗಳನ್ನು ಒದಗಿಸುವ ಸಂಬಂಧ ಹಯಾತ್ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿದ್ದೆ. ಹಾಗೂ ಎಎಪಿಯ ಸತ್ಯೇಂದರ್ ಜೈನ್ ಅವರಿಗೆ ಹತ್ತು ಕೋಟಿ ರೂಪಾಯಿ ನೀಡಲಾಗಿದೆ. ಅದಾದ ಬಳಿಕ ಅವರ ಫಾರ್ಮ್ ಹೌಸ್ ನಲ್ಲಿ 50 ಕೋಟಿ ನೀಡಿದ್ದೇನೆ ಎಂದು ಸುಕೇಶ್ ಆರೋಪ ಮಾಡಿದ್ದಾರೆ.

ಈ ಮಾಹಿತಿ ಬಹಿರಂಗವಾಗುತ್ತಿದ್ದಂತೆಯೇ ಸತ್ಯೇಂದರ್ ಜೈನ್ ನನಗೆ ಜೈಲು ಅಧಿಕಾರಿಗಳ ಮೂಲಕ ಬೆದರಿಕೆಯೊಡ್ಡುತ್ತಿದ್ದಾರೆ. ಸಾಕಷ್ಟು ಸಲ ಬೆದರಿಕೆ ಕ್ರಮ ನಡೆದಿದೆ ಎಂದು ಆರೋಪಿ ಸುಕೇಶ್ ಚಂದ್ರಶೇಖರ್ ಆರೋಪಿಸಿದ್ದಾರೆ.

#Sukesh Chandrashekar #multicore cheating #delhi cm #Aravind Kejriwal #Sathyendra jain #hayath hotel #newdelhi

More News