ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಮತ್ತು ನಾಳೆ ಕರಾವಳಿಯ ಹಲವು ಕಡೆ ಸಾಧಾರಣ ಮಳೆ ಬೀಳಲಿದ್ದು, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ 13, 14 ಮತ್ತು 15ರಂದು ಉತ್ತಮ ಮಳೆಯಾಗಲಿದೆ. ಇತ್ತ ಕೊಡಗು, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ.



ಇತ್ತ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಎರಡು, ಮೂರು ದಿನ ಸಾಧಾರಣ ಮಳೆಯಾಗಲಿದ್ದು, ಬೆಳಗ್ಗೆ ದಟ್ಟ ಮಂಜು ಕವಿದ ವಾತಾವರಣದಿಂದ ಕೂಡಿರಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.




