ಬೆಂಗಳೂರು: ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ನಂದಿನಿ ಹಾಲು, ಮೊಸರಿನ ದರ 3 ರೂಪಾಯಿ ಹೆಚ್ಚಳ ಮಾಡಲಾಗಿದೆ. ನಾಳೆಯಿಂದಲೇ ಪರಿಷ್ಕೃತ ದರ ಜಾರಿ ಆಗಲಿದೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತವು, ನಂದಿನಿ ಹಾಲು ಮತ್ತು ಮೊಸರಿನ ಮಾರಾಟ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ.

ಕೆಎಂ ಎಫ್ ನಿಂದ ಹೈನುಗಾರಿಕೆ ರೈತರಿಗೆ ಬಂಪರ್ ಕೊಡುಗೆ ನೀಡಿದೆ. ಕೆಎಂ ಎಫ್ ಆಡಳಿತ ಮಂಡಳಿ ನಡೆಸಿದ ಸಭೆಯಲ್ಲಿ ಹಾಲು ಮತ್ತು ಮೊಸರಿನ ಬೆಲೆ ಏರಿಕೆ ಮಾಡಲು ತೀರ್ಮಾನಿಸಿದ್ದು, ಪ್ರತಿ ಲೀಟರ್ ಹಾಲು ಮತ್ತು ಮೊಸರಿನ ದರ 3 ರೂ ಏರಿಕೆ ಮಾಡುವುದಾಗಿ ತಿಳಿಸಿದ್ದಾರೆ.

ಹೆಚ್ಚಳವಾದ ಸಂಪೂರ್ಣ ಹಣವನ್ನ ರೈತರಿ ನೀಡುವುದಾಗಿ ಕೆಎಂಎಫ್ ಆಡಳಿತ ಮಂಡಳಿ ತಿಳಿಸಿದೆ. ಪ್ರತಿ ಲೀಟರ್ ಗೆ 40 ರಿಂದ 53 ರ ವರೆಗೂ ದರ ಏರಿಕೆ ಮಾಡಲಾಗಿದ್ದು, ಹೆಚ್ಚುವರಿಯಾದ ದರವನ್ನ ನೇರವಾಗಿ ರೈತರಿಗೆ ನೀಡಲು ಮಂಡಳಿ ತೀರ್ಮಾನಿಸಿದೆ. 2020ರ ಫೆಬ್ರವರಿಯಲ್ಲಿ ಕೊನೆಯ ಬಾರಿ ಹಾಲು ಮತ್ತು ಮೊಸರಿನ ದರ ಹೆಚ್ಚಳವಾಗಿತ್ತು. 2020ರಲ್ಲಿ ಪ್ರತಿ ಲೀಟರ್ ಗೆ 2ರೂ. ಹೆಚ್ಚಳ ಮಾಡಿದ್ದ ಹಾಲು ಒಕ್ಕೂಟ.




