ತೆಲುಗು ಸೂಪರ್ ಸ್ಟಾರ್ ನಟ ಮಹೇಶ್ ಬಾಬು ಅವರ ತಂದೆ ಕೃಷ್ಣ ಘಟ್ಟಮನೇನಿ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೀಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ, ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಗೆಬಗೆ ರೀತಿಯ ಸುದ್ದಿ ಹರಿದಾಡುತ್ತಿದ್ದು, ನೆಟ್ಟಿಗರು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಟ್ವಿಟರ್‌ನಲ್ಲಿ ಹಿರಿಯ ನಟನ ಚೇತರಿಕೆಗೆ ಪ್ರಾರ್ಥಿಸುತ್ತಿದ್ದಾರೆ.

ಕಳೆದ ಕೆಲ ದಿನಗಳ ಹಿಂದಷ್ಟೇ ಪತ್ನಿ ಇಂದಿರಾ ಅವರನ್ನು ಕಳೆದುಕೊಂಡ ಕೃಷ್ಣ, ಕೊಂಚ ನಲುಗಿ ಹೋಗಿದ್ದರು. ಜತೆಗೆ 79 ವರ್ಷ ವಯಸ್ಸಾಗಿರುವುದರಿಂದ ವಯೋಸಹಜ ಸಮಸ್ಯೆಯೂ ಕೃಷ್ಣ ಅವರನ್ನು ಕಾಡುತ್ತಿದೆ. ಆ ಕಾರಣಕ್ಕೆ ಅವರು ಆಸ್ಪತ್ರೆಗೆ ತಪಾಸಣೆಗೆಂದು ತೆರಳಿದ್ದರು.

ಹಿರಿಯ ನಟ ಕೃಷ್ಣ, ಭಾನುವಾರ ಎಂದಿನಂತೆ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಹೋಗಿದ್ದರು. ಅಷ್ಟೇ ಅಲ್ಲ ಅವರಿಗೆ ಆರೋಗ್ಯದಲ್ಲಿ ಯಾವುದೇ ಗಂಭೀರ ಸಮಸ್ಯೆ ಇಲ್ಲ. ಇದೊಂದು ನಾರ್ಮಲ್ ರೂಟಿನ್ ಚೆಕ್‌ಅಪ್. ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
Get Well Soon Superstar #Krishna garu ❤️
— Trends RamCharan (@TweetRamCharan) November 14, 2022
Wishing You a Speedy Recovery. pic.twitter.com/j2zgBqDp0c
ಉಸಿರಾಟದ ಸಮಸ್ಯೆ…
ಭಾನುವಾರವೇ ಹೈದರಾಬಾದ್‌ನ ಕಾಂಟಿನೆಂಟಲ್ ಆಸ್ಪತ್ರೆಗೆ ಕೃಷ್ಣ ದಾಖಲಾಗಿದ್ದರು. ಉಸಿರಾಟದ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ತೆರಳಿದ್ದರು. ಆದರೆ, ಅವರ ಸ್ಥಿತಿ ಸಹಜವಾಗಿ ಇರದ ಕಾರಣ ಆಸ್ಪತ್ರೆಯಲ್ಲಿಯೇ ಇರಿಸಿ ವೈದ್ಯರ ತಂಡ ಚಿಕಿತ್ಸೆ ಮುಂದುವರಿಸಿದೆ.




