ಗುಜರಾತ್ ಸಿಎಂ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಗುಜರಾತ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಭೂಪೇಂದ್ರ ಪಟೇಲ್ ಇಂದು ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗುಜರಾತ್ ನ ಗಾಂಧಿನಗರದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಶೇಷ ವಿಮಾನದ ಮೂಲಕ ಗುಜರಾತ್ ನ ಗಾಂಧಿನಗರಕ್ಕೆ  ತೆರಳಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ್, ಮುರುಗೇಶ ನಿರಾಣಿ, ಡಾ.ಸುಧಾಕರ್ ಅಹಮದಾಬಾದ್ ಗೆ ಸಿಎಂ ಜತೆ ತೆರಳಿದರು.

More News