ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಲಿದೆ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಅಧಿಕೃತವಾಗಿ ಪಂಚರತ್ನ ಯಾತ್ರೆಗೆ ನೀಡಲಾಗುವುದು. ಪಂಚರತ್ನ ಯಾತ್ರೆಗೂ ಮುನ್ನ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲಿರುವ ವಿಶೇಷ ಪೂಜೆ ಸಲ್ಲಿಸಿದರು.

ಮಾಜಿ ಸಿಎಂ ಕುಮಾರಸ್ವಾಮಿ ಅವರು ತಾಯಿ ಚಾಮುಂಡೇಶ್ವರಿಯ ಪರಮ ಭಕ್ತರಾಗಿದ್ದಾರೆ. ಚಾಮುಂಡೇಶ್ವರಿ ಬೆಟ್ಟದಿಂದ ನೇರ ಮುಳಬಾಗಿಲಿಗೆ ಆಗಮಿಸಲಿಸಿದ್ದಾರೆ. ಪಂಚರತ್ನ ಯಾತ್ರೆ ಚಾಲನೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸೇರಿದಂತೆ ಜೆಡಿಎಸ್ ಪಕ್ಷದ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

ಮಧ್ಯಾಹ್ನ 12.30ರಿಂದ ಮುಳಬಾಗಿಲಿನ ತಿರುಪತಿ ಬೈಪಾಸ್ ರಸ್ತೆಯ ಬಾಲಾಜಿ ಭವನದ ಪಕ್ಕದಲ್ಲಿ ಸಮಾವೇಶ ಬೃಹತ್ ನಡೆಯಲಿದೆ. 2 ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ. ಬೃಹತ್ ಸಮಾವೇಶದಲ್ಲಿ ಮಾಜಿ ಪ್ರಧಾನಿಗಳು, ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಇನ್ನಿತರ ನಾಯಕರ ಭಾಷಣ ಮಾಡಲಿದ್ದಾರೆ. ಇದಾದ ಬಳಿಕ ಕೊನೆಯಲ್ಲಿ ಜೆಡಿಎಸ್ ಪಕ್ಷದ 90 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾಜಿ ಪ್ರಧಾನಿ ದೇವೇಗೌಡರು ಬಿಡುಗಡೆ ಮಾಡಲಿದ್ದಾರೆ.




