ಚಿಕ್ಕಮಗಳೂರು: ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ವಿವಾದ ಸಂಬಂಧ ರಾಜ್ಯ ಸರ್ಕಾರ, ಆಡಳಿತ ಮಂಡಳಿ ರಚನೆ ಮಾಡಿ ಆದೇಶ ಹೊರಡಿಸಿದೆ. ಚಿಕ್ಕಮಗಳೂರು ತಾಲ್ಲೂಕಿನ ಶ್ರೀಗುರು ದತ್ತಾತ್ರೇಯ ಬಾಬಾಬುಡನ್‌ಸ್ವಾಮಿ ದರ್ಗಾ, ಪೀಠಕ್ಕೆ 8 ಜನ ಸದಸ್ಯರಿರುವ ವ್ಯವಸ್ಥಾಪನಾ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವ್ಯವಸ್ಥಾಪನಾ ಸಮಿತಿಯಲ್ಲಿ ಕೆ.ಸತೀಶ್, ಸಿ.ಜಿ. ಲೀಲಾ, ಶೀಲಾ, ಎನ್.ಎಸ್.ಸುಮಂತ್, ಕೆ.ಎಸ್.ಗುರುವೇಶ್, ಜಿ. ಎಚ್.ಹೇಮಂತ್‌ಕುಮಾರ್, ಎಸ್.ಎಂ.ಭಾಷಾ, ಸಿ.ಎಸ್.ಚೇತನ್ ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಸದಸ್ಯ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಆದೇಶದಲ್ಲಿ ತಿಳಿಸಿದ್ದಾರೆ.

ವ್ಯವಸ್ಥಾಪನಾ ಸಮಿತಿ ಸದಸ್ಯರಾಗಲು ೪೨ ಅರ್ಜಿಗಳು ಬಂದಿದ್ದು, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ ಆಧಾರದ ಮೇಲೆ ಈ ಮೇಲ್ಕಂಡವರನ್ನು ಆಯ್ಕೆ ಮಾಡ ಲಾಗಿದೆ ಎಂದು ತಿಳಿಸಿದ್ದಾರೆ.

ಸದಸ್ಯರು ರಾಜಕೀಯ ಪಕ್ಷದ ಪದಾಧಿಕಾರಿಗಳು ಎಂದು ಕಂಡು ಬಂದಲ್ಲಿ ಅಂತವರ ಸದಸ್ಯತ್ವ ರದ್ದಾಗಲಿದೆ. ದೇವಾಲಯದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಯನ್ನು ವ್ಯವಸ್ಥಾಪನಾ ಸಮಿತಿಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಸದಸ್ಯರು ತಮ್ಮ ಪ್ರಥಮ ಸಭೆಯಲ್ಲಿ ಸಮಿತಿಯ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಈ ಆದೇಶವು ಉಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ರೀಟ್ ಅಪೀಲು ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಷರತ್ತುಗಳನ್ನು ವಿಧಿಸಲಾಗಿದೆ.
#SRI GURU DATTATREYA BABA BUDAN SWAMY’S DARGA #CHIKKAMAGALURU #BOARD #EIGHT MEMBERS #STATE GOVERNMENT #SUPREEME COURT




