ಕೋಲಾರ : ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಹೆಚ್ ಡಿ ಕುಮಾರಸ್ವಾಮಿ ತಂದೆ ಮಾಜಿ ಪ್ರದಾನಿ ಹೆಚ್ ಡಿ ದೇವೇಗೌಡ , ತಾಯಿ ಚೆನ್ನಮ್ಮ, ಮಗ ನಿಖಿಲ್ ಹೆಸರಲ್ಲಿ ಅರ್ಚನೆ ಮಾಡಿಸಿದರು. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಮಾಗೇರಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಹೂಡಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಇಂದು ಬೆಳಗ್ಗೆ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದರು.

ಪಂಚರತ್ನ ರಥಯಾತ್ರೆ ಹಿನ್ನೆಲೆ ಗ್ರಾಮ ವಾಸ್ತವ್ಯ ಹೂಡಿದ್ದ ಕುಮಾರಸ್ವಾಮಿಗೆ ಎಂಎಲ್.ಸಿ ಗೋಂವಿಂದ ರಾಜು, ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು, ವಕ್ಕಲೇರಿ ರಾಮ ಸೇರಿದಂತೆ ಹಲವಾರು ಮುಖಂಡರು ಸಾಥ್ ನೀಡಿದ್ರು. ಪೂಜೆ ಬಳಿಕ ಇಂದು ಮಾಲೂರು ತಾಲ್ಲೂಕಿನತ್ತ ಪಂಚರತ್ನ ರಥಯಾತ್ರೆ ತೆರಳಿತು.






